ಕುಂದಾಪುರದಲ್ಲಿ ಎನ್ನೆಸ್ಸೆಸ್ ಅಭಿವಿನ್ಯಾಸ ಕಾರ್ಯಕ್ರಮ

gan (4)
Published on

ಕುಂದಾಪುರ: ಕುಂದಾಪುರದ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಟಕ 1 ಮತ್ತು 2ರ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಎನ್ನೆಸ್ಸೆಸ್ ಅಭಿವಿನ್ಯಾಸ ಶುಕ್ರವಾರ ನಡೆಯಿತು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಭರತ್‌ಕುವಾರ್ ಶೆಟ್ಟಿ ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕ ಪ್ರವೀಣ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಐಕ್ಯೂಎಸಿ ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಎನ್‌ಎಸ್‌ಎಸ್ ಟಕ 1 ಮತ್ತು 2 ಸಂಯೋಜನಾಧಿಕಾರಿ ಶ್ರುತಿ ಆಚಾರ್ಯ ಎನ್. ಉಪಸ್ಥಿತರಿದ್ದರು.

ರೂಪೇಶ್, ಅಕ್ಷಯ್, ವನಿಶಾ, ಶ್ರೇಯಾ ಅವರನ್ನು ವಿದ್ಯಾರ್ಥಿ ಪ್ರತಿನಿಧಿಗಳನ್ನಾಗಿ ಆಯ್ಕೆ ಮಾಡಲಾಯಿತು. ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ನಿರಂಜನ ಶರ್ಮ ಸ್ವಾಗತಿಸಿದರು. ಸಜನಿ ನಿರೂಪಿಸಿದರು. ಸುಷ್ಮಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net