ನಾಯಕತ್ವ ಗುಣ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ

IMG-20240529-WA0319
Published on

ಅರಸೀಕೆರೆ ಗ್ರಾಮಾಂತರ: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಗತ್ಯ ಎಂದು ಬಾಣಾವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ದೊರೇಶ ಹೇಳಿದರು.


ಕಸಬಾ ಹೋಬಳಿ ಜಾಜೂರು ಸಮೀಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್ ಮತ್ತು ರೆಡ್ ರಿಬ್ಬನ್ ಮತ್ತು ರೇಂಜರ್ಸ್ ಮತ್ತು ರೋವರ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಇತರರು ಗುರುತಿಸುವ ರೀತಿಯಲ್ಲಿ ಸಾಧನೆ ಮಾಡಬೇಕು. ಪಾಲಕರಿಗೆ ಕೀರ್ತಿ ತರುವಂತರಾಗಬೇಕು. ಯುವಕರ ಮೇಲೆ ದೇಶದ ಪ್ರಗತಿ ನಿಂತಿದೆ ಎಂದರು.


ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ನಾರಾಯಣ್ ಮಾತನಾಡಿ, ವಿದ್ಯಾರ್ಥಿಗಳು ಕುಟುಂಬ, ಸಮಾಜ, ದೇಶದ ಬಗ್ಗೆ ಗೌರವವಿಟ್ಟುಕೊಳ್ಳಬೇಕು ಎಂದು ಹೇಳಿದರು.


ಪ್ರತಿಭಾನ್ವಿತ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ ವೇದಿಕೆ ಸಂಚಾಲಕ ಡಾ.ರಾಜೇಶ್ ಖನ್ನಾ, ಸಹ ಪ್ರಾಧ್ಯಾಪಕ ಡಾ.ಜಿ.ಎಲ್.ಭಾಸ್ಕರ್, ಚಿತ್ರಕಲಾ, ಎಸ್.ವಿ.ಸುಬ್ರಹ್ಮಣ್ಯ, ಎಂ.ಎನ್.ಸುನೀಲ್ ಕುಮಾರ್, ಎಚ್.ಹರೀಶ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net