ಜೀವನ ಪಥವನ್ನೇ ಬದಲಾಯಿಸಬಲ್ಲ ಶಕ್ತಿ : ಡಾ.ಸುದರ್ಶನ್ ಅಭಿಮತ

New Project (20)
Published on

ಮೂಡುಬಿದಿರೆ: ಎನ್‌ಎಸ್‌ಎಸ್ ನಮ್ಮ ಜೀವನದ ಪಥವನ್ನೇ ಬದಲಾಯಿಸಬಲ್ಲ ಶಕ್ತಿ ಹೊಂದಿದೆ. ವಿದ್ಯಾರ್ಥಿಗಳು ತಮ್ಮೊಳಗಿನ ಶಕ್ತಿಯನ್ನು ಗುರುತಿಸಿ, ಸದುಪಯೋಗಪಡಿಸಿಕೊಳ್ಳಬೇಕು. ದೈಹಿಕ ಸ್ವಚ್ಛತೆ ಜತೆಗೆ ಮಾನಸಿಕ ಸ್ವಚ್ಛತೆಯೂ ಅಗತ್ಯ. ಹೃದಯ ಶ್ರೀಮಂತಿಕೆ ಆರ್ಥಿಕ ಶ್ರೀಮಂತಿಕೆಗಿಂತ ಮಿಗಿಲಾದದು ಎಂದು ಕಾರ್ಕಳದ ಮಂಜುನಾಥ ಪೈ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಸುದರ್ಶನ್ ಪಿ.ಹೇಳಿದರು.

ಆಳ್ವಾಸ್ ಪಿಯು ಕಾಲೇಜಿನ 2025-26ನೇ ಶೈಕ್ಷಣಿಕ ವರ್ಷದ ಎನ್ನೆಸ್ಸೆಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಪ್ರಾಂಶುಪಾಲ ಮೊಹಮ್ಮದ್ ಸದಾಕತ್ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಡೀನ್ ಡಾ.ಪ್ರಶಾಂತ್ ಎಂ.ಡಿ., ಸಂಸ್ಕೃತ ವಿಭಾಗದ ಮುಖ್ಯಸ್ಥ ಅಂಬರೀಷ್ ಚಿಪಳೂಣ್ಕರ್ ಉಪಸ್ಥಿತರಿದ್ದರು. ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಎನ್ನೆಸ್ಸೆಸ್ ಸಂಯೋಜಕಿ ಮೇಘನಾ ಸ್ವಾಗತಿಸಿದರು. ಉಪನ್ಯಾಸಕಿ ಸ್ವಾತಿ ಹಾಗೂ ಗಣಿತ ವಿಭಾಗದ ಮುಖ್ಯಸ್ಥ ಪ್ರಭಾತ್ ನಿರೂಪಿಸಿದರು. ಗಣಪತಿ ನಾಯಕ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net