

ಶನಿವಾರಸಂತೆ: ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ನಾಯಕತ್ವ ಬೆಳವಣಿಗೆಗೆ ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ವೇದಿಕೆ ಎಂದು ಕೊಡ್ಲಿಪೇಟೆ ಕೊಡ್ಲಿಪೇಟೆ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್.ಪರಮೇಶ್ ಹೇಳಿದರು.
ಸಮೀಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಕೊಡಗು ವಿಶ್ವವಿದ್ಯಾಲಯ ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಆಯೋಜಿಸಿದ್ದ ಒಂದು ದಿನದ ಶಿಬಿರ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಎನ್ನೆಸ್ಸೆಸ್ಸ್ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಬಹುದು ಎಂದರು.
ಕಾಲೇಜು ಪ್ರಾಂಶುಪಾಲ ಎಂ.ಆರ್.ನಿರಂಜನ್ ಮಾತನಾಡಿ, ಕೊಡಗು ಪ್ರತೇಕ ವಿಶ್ವವಿದ್ಯಾಲಯವಾಗಿರುವ ಹಿನ್ನೆಲೆಯಲ್ಲಿ ಎನ್ನೆಸ್ಸೆಸ್ ಘಟಕ ವಿವಿ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸಲಿದೆ. ವಿದ್ಯಾರ್ಥಿಗಳು ಎಂದಿನಂತೆ ಎನ್ನೆಸ್ಸೆಸ್ ಘಟಕದಲ್ಲಿ ತೊಡಗಿಸಿಕೊಳ್ಳುವ ಮೂಲಕ ಮೂಲಕ ಗಮನ ಸೆಳೆಯಬೇಕು ಎಂದು ಮನವಿ ಮಾಡಿದರು.
ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಜಗದೀಶ್ ಬಾಬು, ಎನ್ನೆಸ್ಸೆಸ್ ಯೋಜನಾಧಿಕಾರಿ ಕೆ.ಎಚ್.ಯೋಗೇಂದ್ರ ಮಾತನಾ ಡಿದರು. ಘಟಕದ ಶಿಬಿರಾರ್ಥಿಗಳು ಕಾಲೇಜು ಆವರಣ ಜಾಗವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು. ನಂತರ ಗಿಡಗಳನ್ನು ನೆಟ್ಟರು.