ಮೈಸೂರು ವಿವಿಯಿಂದ ಎನ್‌ಎಸ್‌ಎಸ್ ರಾಷ್ಟ್ರೀಯ ಏಕತಾ ಶಿಬಿರ

NSS National Unity Camp from Mysore University
Published on

ಮೈಸೂರು: ನಗರದ ಸರಸ್ವತಿಪುರಂನ ಎನ್‌ಎಸ್‌ಎಸ್ ಭವನದಲ್ಲಿ ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗುರುವಾರ ರಾಷ್ಟ್ರೀಯ ಏಕತಾ ಶಿಬಿರ ಆಯೋಜಿಸಲಾಗಿತ್ತು.

ಎನ್‌ಎಸ್‌ಎಸ್ ಅಧಿಕಾರಿ ಡಾ.ಪ್ರತಾಪ್ ಮಾತನಾಡಿ, ಭಾರತ ವೈವಿಧ್ಯಮಯ ಸಂಸ್ಕೃತಿ, ಭಾಷೆ, ಆಹಾರ ಮತ್ತು ಸಂಪ್ರದಾಯಗಳನ್ನು ಹೊಂದಿದೆ. ವಿವಿಧತೆಯಲ್ಲಿ ನಾವು ಏಕತೆಯನ್ನು ಸಾಧಿಸಿದ್ದೇವೆ. ಇದು ಪ್ರಗತಿಗೆ ಪ್ರಮುಖವಾಗಿದೆ. ನಮ್ಮ ದೇಶವನ್ನು ಎಲ್ಲ ರೀತಿಯಲ್ಲೂ ಮುನ್ನಡೆಸಲು ನಾವು ಸಾವಾನ್ಯ ಗುರಿಗಳನ್ನು ಹೊಂದಿರಬೇಕು ಎಂದು ಕರೆ ನೀಡಿದರು.

ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕೆಲವು ಸಮಸ್ಯೆಗಳು ಇವೆ. ಜಾತೀಯತೆ, ಕೋಮುವಾದ, ಪ್ರಾದೇಶಿಕತೆ ಮುಂತಾದ ವುಗಳು ರಾಷ್ಟ್ರಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶಕ ಡಿ.ಕಾರ್ತಿಗ್ವಾನ್, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net