

ಕುಂದಾಪುರ: ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು ಎನ್ನೆಸ್ಸೆಸ್ ಘಟಕ ಆಶ್ರಯದಲ್ಲಿ ಎನ್ನೆಸ್ಸೆಸ್ ಪೂರ್ವ ಪರಿಚಯ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆಯಿತು. ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿ ದೀಪಾ ಪೂಜಾರಿ ಎನ್ನೆಸ್ಸೆಸ್ ಉದ್ದೇಶ, ಕಾರ್ಯ ಚಟುವಟಿಕೆ ಹಾಗೂ ಎನ್ನೆಸ್ಸೆಸ್ ಶಿಬಿರದ ಕುರಿತು ಮಾಹಿತಿ ನೀಡಿದರು. ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅಧ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ನಾಯಕ ಹಾಗೂ ನಾಯಕಿ, ಉಪನ್ಯಾಸಕರು ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಯೋಜನಾ ಅಧಿಕಾರಿಗಳಾದ ವನಿತಾ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಿಥುನ್ ಸ್ವಾಗತಿಸಿದರು. ಎನ್ನೆಸ್ಸೆಸ್ ನಾಯಕ ಯಮನೂರು ವಂದಿಸಿದರು. ಮೈಥಿಲಿ ಕಾರ್ಯಕ್ರಮ ನಿರೂಪಿಸಿದರು.