ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್ ಪೂರಕ

15 anr15
ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ಪ್ರೊ. ಕೆ.ಸಿ.ವೀರಣ್ಣ ಮಾತನಾಡಿದರು. ಪ್ರೊ. ಗಣೇಶ ಉಡುಪ, ರಮೇಶ್, ಶಿವಕುಮಾರ್ ಇತರರಿದ್ದರು.
Published on

ಆಯನೂರು: ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರಗಳು ಸಮುದಾಯ ಸೇವೆಯ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಸರ್ವತೋಮುಖ ಬೆಳವಣಿಗೆಗಳಿಗೆ ಕಾರಣವಾಗುತ್ತವೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಸಿ.ವೀರಣ್ಣ ತಿಳಿಸಿದರು.

ಸಮೀಪದ ಕಾಚಿಕೊಪ್ಪ ಗ್ರಾಮದಲ್ಲಿ ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದಿಂದ ಆಯೋಜಿಸಿದ್ದ ಒಂದು ವಾರದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಮಹಾವಿದ್ಯಾಲಯದ ಡೀನ್ ಪ್ರೊ. ಗಣೇಶ ಉಡುಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಅಲೆಂಬಿಕ್ ಫಾರ್ಮಾ ಕಂಪನಿಯ ಮುಖ್ಯ ವ್ಯವಸ್ಥಾಪಕ ಡಾ. ಸಂಜಯ್ ಟೋಕೆ, ಗ್ರಾಪಂ ಸದಸ್ಯ ಶಿವಕುಮಾರ್, ಮುಖಂಡರಾದ ನಾಗರಾಜಪ್ಪ, ಗುರುಬಸಪ್ಪ, ಮಹೇಶ್ವರಪ್ಪ, ವಿರೂಪಾಕ್ಷಪ್ಪ, ಮಂಜಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net