ಜೀವನ ಮೌಲ್ಯ ಕಲಿಸುವ ಎನ್‌ಎಸ್‌ಎಸ್

17M.D.R.9
Published on

ಮದ್ದೂರು: ರಾಷ್ಟ್ರೀಯ ಸೇವಾ ಯೋಜನೆಯು ಶಿಬಿರಾರ್ಥಿಗಳಿಗೆ ಸೇವಾ ಮನೋಭಾವ ಹಾಗೂ ಜೀವನ ಮೌಲ್ಯ ಕಲಿಸುತ್ತದೆ ಎಂದು ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಧೆಯ ಕಾರ್ಯದರ್ಶಿ ಸಿ.ಅಪೂರ್ವಚಂದ್ರ ಹೇಳಿದರು.


ತಾಲೂಕಿನ ಬೆಳತೂರು ಗ್ರಾಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಎಚ್.ಕೆ.ವೀರಣ್ಣಗೌಡ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಟಾಟಿಸಿ ಮಾತನಾಡಿದರು.
ಭಾರತವು ಗಾಮೀಣ ಪ್ರದೇಶಗಳಿಂದ ಕೂಡಿದ್ದು ಗಾಂಧೀಜಿ ಅವರ ಪರಿಕಲ್ಪನೆಯಲ್ಲಿ ಪ್ರಾರಂಭವಾದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳುವುದರ ಮೂಲಕ ಭಾವೈಕೈತೆ, ಸೌಹಾರ್ದತೆ, ಸಹಕಾರ, ಸಂಯಮ, ವ್ಯಕ್ತಿತ್ವ ವಿಕಸನ, ಸ್ವಚ್ಛತೆ ಒಳಗೊಂಡಂತೆ ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಸಮಾಜಮುಖಿ ವ್ಯಕ್ತಿಯಾಗಿ ರೂಪುಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.


ಹೊಸಕೆರೆ ಗ್ರಾಪಂ ಅಧ್ಯಕ್ಷೆ ಶಾಂತಮ್ಮ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ನಿರ್ಮಲಾ ಕೆಂಪಯ್ಯ, ಸದಸ್ಯರಾದ ಡಿ.ನಳಿನಾಕುಮಾರಿ, ಅನಂತರಾಮು, ಮುಖಂಡರಾದ ಬಿ.ಎಂ.ಶಿವರಾಮು, ಎಂ.ಶಿವರಾಜು ಪ್ರಾಂಶುಪಾಲರಾದ ಯು.ಎಸ್.ಶಿವಕುಮಾರ್, ಜಿ.ಎಸ್.ಶಂಕರೇಗೌಡ, ಶಿಬಿರಾಧಿಕಾರಿಗಳಾದ ಎಚ್.ಎಸ್.ಪಂಚಲಿಂಗೇಗೌಡ ಹಾಗೂ ಸಹ ಶಿಬಿರಾಧಿಗಳಾದ ಎನ್.ರೇವಣ್ಣ, ಸಿ.ಜಯವರ್ಧನ್, ಎಂ.ಟಿ.ಮೋಹನ್‌ಕುಮಾರ್, ಜಿ.ಸುರೇಂದ್ರ, ಬಿ.ಸಿ.ಶಿವಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net