

ನರೇಗಲ್ಲ: ವಿದ್ಯಾರ್ಥಿಗಳು ಸಮುದಾಯ ಸೇವಾ ಚಟುವಟಿಕೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಾಗೂ ಸಮಾಜದ ಸೇವೆ ಮಾಡಲು ಎನ್ನೆಸ್ಸೆಸ್ ಉತ್ತಮ ವೇದಿಕೆ ಒದಗಿಸುತ್ತದೆ. ಅದರ ಸದ್ಬಳಕೆಗೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಧಾರವಾಡ ವಿಶ್ವವಿದ್ಯಾಲಯದ ಎನ್ನೆಸ್ಸೆಸ್ ಕಾರ್ಯಕ್ರಮ ಯೋಜನಾಧಿಕಾರಿ ಎಂ.ಬಿ. ದಳಪತಿ ಹೇಳಿದರು.
ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಿಂದ ಸಮೀಪದ ಕೋಡಿಕೊಪ್ಪ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿರುವ ಎನ್ನೆಸ್ಸೆಸ್ ಘಟಕದ ವಾರ್ಷಿಕ ಶಿಬಿರಕ್ಕೆ ಮಂಗಳವಾರ ಭೇಟಿ ನೀಡಿ ಅವರು ಮಾತನಾಡಿದರು.
ಕಾಲೇಜ್ ಪ್ರಾಚಾರ್ಯ ಎಸ್.ಎಲ್. ಗುಳೇದಗುಡ್ಡ ಮಾತನಾಡಿದರು. ಯೋಜನಾಧಿಕಾರಿ ಎಂ.ಬಿ. ದಳಪತಿ ಅವರನ್ನು ಸನ್ಮಾನಿಸಲಾಯಿತು. ಕಾಲೇಜ್ನ ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಶಿವಮೂರ್ತಿ ಕುರೇರ, ಸುನಂದಾ ಮುಂಜಿ, ವಿವಿಧ ವಿಭಾಗದ ಪ್ರಾಧ್ಯಾಪಕರು ಇದ್ದರು.