ಪರಿಸರ ಸ್ನೇಹಿ ಗಣೇಶಮೂರ್ತಿ ಪ್ರತಿಷ್ಠಾಪಿಸಿ

27 CRP-2A.
Published on

ಚನ್ನರಾಯಪಟ್ಟಣ: ಭಾವೈಕ್ಯ ಮತ್ತು ಸಾಮರಸ್ಯ ಸಂಕೇತವಾದ ಗೌರಿ-ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳಿಗೆ ಮಾತ್ರ ಆದ್ಯತೆ ನೀಡಿ ಎಂದು ಪುರಸಭೆ ಅಧ್ಯಕ್ಷೆ ಕೆ.ಎನ್.ಬನಶಂಕರಿ ರಘು ಮನವಿ ಮಾಡಿದರು.


ಪಟ್ಟಣದ ಪುರಸಭಾ ಕಚೇರಿಯಲ್ಲಿ ಮಂಗಳವಾರದಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು,
ಸರ್ಕಾರ ವಿಷಕಾರಿ ಬಣ್ಣಗಳ ಗಣೇಶ ಮೂರ್ತಿಗಳ ಮಾರಾಟ ಮತ್ತು ಪ್ರತಿಷ್ಠಾಪನೆಯನ್ನು ನಿಷೇಧ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಗೌರಿ-ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಿಕೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಸರ್ಕಾರ ಜಾರಿಗೊಳಿಸುವಂತೆ ಎಲ್ಲ ಜಿಲ್ಲಾಡಳಿತಗಳಿಗೆ ಈಗಾಗಲೇ ಸೂಚಿಸಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಪುರಸಭೆ ವ್ಯಾಪ್ತಿಯಲ್ಲಿಯೂ ಪರಿಸರಕ್ಕೆ ಮಾರಕವಾಗಿರುವ ಗಣಪತಿಗಳ ತಯಾರಿಕೆ, ಮಾರಾಟ ಹಾಗೂ ಪ್ರತಿಷ್ಠಾಪನೆ ನಿಷೇಧಿಸಲಾಗಿದೆ. ಅಂತಹ ಮೂರ್ತಿಗಳನ್ನು ಸ್ಥಾಪಿಸಿದರೆ ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲು ಅವಕಾಶವಿರುತ್ತದೆ. ಪುರಸಭೆ ಆಡಳಿತವು ಹಲವಾರು ವರ್ಷಗಳಿಂದ ಪರಿಸರಸ್ನೇಹಿ ಗಣಪತಿಗಳ ಸ್ಥಾಪನೆಗೆ ಆದ್ಯತೆ ನೀಡುತ್ತಾ ಬಂದಿದೆ ಎಂದ ತಿಳಿಸಿದರು.


ಪುರಸಭಾ ಮುಖ್ಯಾಧಿಕಾರಿ ಕೆ.ಎನ್.ಹೇಮಂತ್ ಮಾತನಾಡಿ, ಗಣಪತಿ ಪ್ರತಿಷ್ಠಾಪನೆಗೆ ಲಿಖಿತ ಅನುಮತಿ ಕಡ್ಡಾಯವಾಗಿದೆ. ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಲಾಗುತ್ತಿದ್ದು, ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳು ಸಂಪೂರ್ಣ ಸಹಕಾರ ನೀಡಬೇಕು ಹಾಗೂ ಸೆ.7ರ ಗಣಪತಿ ಹಬ್ಬದಂದು ಸಾಮೂಹಿಕವಾಗಿ ಗಣಪತಿ ವಿಸರ್ಜನೆಗಾಗಿ ಆಯಾ ಸ್ಥಳಗಳಲ್ಲಿ, ಬಡಾವಣೆಗಳಲ್ಲಿ ವೃತ್ತಗಳಲ್ಲಿ ನೀರು ತುಂಬಿದ ಪುರಸಭೆ ವಾಹನಗಳು ನಿಲ್ಲಿಸಲಾಗುತ್ತದೆ. ಈ ವಾಹನಗಳಲ್ಲಿ ಸಾರ್ವಜನಿಕರು ಶಾಸ್ತ್ರೋಕ್ತವಾಗಿ ವಿಗ್ರಹಗಳನ್ನು ವಿಸರ್ಜನೆ ಮಾಡಬಹುದಾಗಿದೆ. ಇಂತಹ ಬೆಳವಣಿಗೆಗಳಿಂದ ಕೆರೆ-ಕಟ್ಟೆಗಳು ಮತ್ತು ಬಾವಿಗಳ ಹತ್ತಿರ ಆಗಬಹುದಾದ ಹಾನಿಗಳನ್ನು ತಪ್ಪಿಸಬಹುದಾಗಿದೆ ಎಂದು ಮನವಿ ಮಾಡಿದರು
ಉಪಾಧ್ಯಕ್ಷೆ ರಾಣಿಕೃಷ್ಣ, ಪರಿಸರ ಇಂಜಿನಿಯರ್ ಬಿ.ಎ.ಕಾವ್ಯಶ್ರೀ, ಆರೋಗ್ಯ ನಿರೀಕ್ಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net