ಎನ್‌ಎಸ್‌ಯುಐ ಪದಾಧಿಕಾರಿಗಳ ಪದಗ್ರಹಣ ಸಂಪನ್ನ

mng-18july-nsui2
Published on

ಮಂಗಳೂರು: ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೂತನ ಜಿಲ್ಲಾ ಪದಾಧಿಕಾರಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳ
ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಅವರ ನೇತೃತ್ವದಲ್ಲಿ ಮಲ್ಲಿಕಟ್ಟೆಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಈ ವೇಳೆ ಶಿಕ್ಷಣ ನಮ್ಮ ಹಕ್ಕು ವಿದ್ಯಾರ್ಥಿ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ನೂತನ ಪದಾಧಿಕಾರಿಗಳಿಗೆ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯದರ್ಶಿ ಪಿ.ವಿ. ಮೋಹನ್ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಮಾಜಿ ಸಚಿವ ಬಿ.ಬಿ.ರಮಾನಾಥ ರೈ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಕಾರ್ಯದರ್ಶಿ ಐವನ್ ಡಿ'ಸೋಜ, ರಾಜ್ಯ ಯುವ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಫಾರೂಕ್ ಬಯಾಬೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ, ಕಾಂಗ್ರೆಸ್ ಮುಖಂಡರಾದ ಲಾರೆನ್ಸ್ ಡಿಸೋಜ, ಅಬ್ಬಾಸ್ ಅಲಿ, ಶುಭೋದಯ ಆಳ್ವ, ನೀರಜ್ ಪಾಲ್, ಅನಿಲ್ ಕಂಕನಾಡಿ, ಸುಹೈಲ್ ಕಂದಕ್, ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಪೂಜಾರಿ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ರಾಕೇಶ್ ದೇವಾಡಿಗ, ಉಪಾಧ್ಯಕ್ಷ ಶೇಖ್ ಅಫ್ಶನ್ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net