ವೈದ್ಯಕೀಯ ಸೇವೆಯಲ್ಲಿ ಬದ್ಧತೆ ಹಾಗೂ ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

Sudhamurthy
The President, Smt. Droupadi Murmu presenting the Padma Bhushan Award to Smt. Vani Jairam (Posthumous) at the Civil Investiture Ceremony-II at Rashtrapati Bhavan, in New Delhi on April 5, 2023.
Published on

ಬೆಂಗಳೂರು: ಸ್ಪರ್ಧಾತ್ಮಕ ಜಗತ್ತಿನಲ್ಲಿ ಖಾಸಗಿ ಆಸ್ಪತ್ರೆಯೊಂದು ಬದ್ಧತೆ ಹಾಗೂ ನೈತಿಕತೆಯೊಂದಿಗೆ ವೈದ್ಯಕೀಯ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಮಾಜಿ ಅಧ್ಯಕ್ಷೆ ಹಾಗು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಹೇಳಿದರು.

ನಗರದ ನಿಮ್ಹಾನ್ಸ್ ಕನ್ವೆನ್ಷನ್ ಹಾಲ್‌ನಲ್ಲಿ ಶನಿವಾರ ಆಯೋಜಿಸಿದ್ದ ‘ಎನ್‌ಯು ರಜತ ಮಹೋತ್ಸವ’ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರಸ್ತುತ ಸಂದರ್ಭದಲ್ಲಿ ಒಂದು ಆಸ್ಪತ್ರೆ ನಡೆಸುವುದು ಸುಲಭದ ಕೆಲಸವಲ್ಲ. ಹಾಗಿರುವಾಗ ಎನ್‌ಯು ಆಸ್ಪತ್ರೆ 25 ವರ್ಷಗಳನ್ನು ಪೂರ್ಣಗೊಳಿಸಿರುವುದು ಸಾಹಸವೇ ಸರಿ. ಆ ನಿಟ್ಟಿನಲ್ಲಿ ಆಸ್ಪತ್ರೆಯ ಈ ಪಯಣ ನಿಜಕ್ಕೂ ಅಭಿನಂದನಾರ್ಹ. ಇಂದು ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆ ನಡೆಸುವುದು ಅಸಾಧ್ಯದ ಮಾತು. ಹಾಗೆಯೇ ಕೇವಲ ಹಣ ಮಾಡುವುದಕ್ಕಷ್ಟೇ ಆಸ್ಪತ್ರೆ ನಡೆಸುವುದು ಸರಿಯಾದ ಕ್ರಮವಲ್ಲ. ಆದರೆ ಬದ್ಧತೆ ಹಾಗೂ ನೈತಿಕತೆ ಇಟ್ಟುಕೊಂಡು ಸೇವೆ ನೀಡುವ ಕೆಲಸ ಮಾಡಬೇಕಿದೆ. ಅದನ್ನು ಎನ್‌ಯು ಆಸ್ಪತ್ರೆ ಮಾಡುತ್ತಾ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಎನ್‌ಯು ಆಸ್ಪತ್ರೆಯ ಅಧ್ಯಕ್ಷ ಡಾ. ವೆಂಕಟೇಶ್ ಕೃಷ್ಣಮೂರ್ತಿ ಮಾತನಾಡಿ, ನಮ್ಮ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯರು ರೋಗಿಗಳಿಗೆ ಉತ್ತಮ ಆರೈಕೆ ಮತ್ತು ಚಿಕಿತ್ಸೆ ಒದಗಿಸುತ್ತಿದ್ದಾರೆ. ಜೊತೆಗೆ ವೈದ್ಯಕೀಯ ನಿಯತಕಾಲಿಕಗಳಲ್ಲಿ ಸಂಶೋಧನೆಗಳನ್ನು ಪ್ರಕಟಿಸುತ್ತಾ ಬಂದಿದ್ದಾರೆ. ಗುಣಮಟ್ಟದ ಸೇವೆ ನೀಡುವ ಮೂಲಕ ರೋಗಿಗಳ ಚೇತರಿಕೆ ಪ್ರಮಾಣ ಹೆಚ್ಚುತ್ತಿದೆ. ಆಸ್ಪತ್ರೆಯು ಅತ್ಯಾಧುನಿಕ ಐಸಿಯು ಸೌಲಭ್ಯಗಳು, 24/7 ಡಯಾಲಿಸಿಸ್ ಸೇವೆ, ಸುಧಾರಿತ ಪ್ರಯೋಗಾಲಯ ಮತ್ತು ರೇಡಿಯೊ ಡಯಾಗ್ನೋಸಿಸ್ ಸೇವೆಗಳು ಮತ್ತು ಯುರೊಡೈನಾಮಿಕ್ಸ್ ಸೌಲಭ್ಯಗಳನ್ನು ಹೊಂದಿದೆ ಎಂದು ಆಸ್ಪತ್ರೆಯಲ್ಲಿನ ಸೇವೆ ಹಾಗು ಸೌಲಭ್ಯಗಳ ಕುರಿತು ವಿವರಿಸಿದರು.

ಎನ್‌ಯು ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಸನ್ನ ವೆಂಕಟೇಶ್ ಮಾತನಾಡಿ, ಆಸ್ಪತ್ರೆಯ ಸ್ಥಾಪನೆ, ಆರಂಭದ ದಿನಗಳ ಸೇವೆ, ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆ ಸೇರಿದಂತೆ ಭವಿಷ್ಯದ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯಲ್ಲಿ ಧೀರ್ಘ ಕಾಲದಿಂದ ಸೇವೆ ಸಲ್ಲಿಸುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net