

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್‌ಡಿಅರ್‌ಎ್ ವತಿಯಿಂದ ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್‌ನಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಆಯೋಜಿಸಿದ್ದ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನ ಯಶಸ್ವಿಯಾಗಿ ನಡೆಸಲಾಯಿತು.
ಆ್ಸೈಟ್ ತುರ್ತು ಅಣಕು ಪ್ರದರ್ಶನದಲ್ಲಿ 50 ಕ್ಕೂ ಹೆಚ್ಚು ಪೊಲೀಸರು, ಎನ್‌ಡಿಆರ್‌ಎ್ ಸಿಬ್ಬಂದಿ, ಅಗ್ನಿಶಾಮಕ ದಳ, 12 ಆಂಬ್ಯುಲೆನ್ಸ್ ವಾಹನಗಳು, ವೈದ್ಯರು ಸೇರಿ ವಿವಿಧ ಇಲಾಖೆಗಳಿಂದ 100 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.
ಈ ಅಣುಕು ಪ್ರದರ್ಶನವನ್ನು ನೈಜ ಘಟನೆಯಂತೆ ಬಿಂಬಿಸಲಾಗಿತ್ತು. ಎಂಎಸ್‌ಎಲ್‌ಪಿಜಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್, ಬಿಪಿಸಿಎಲ್ ಎಲ್ಟಿಡಿ, ಎಂಪಿಸಿಎಲ್ ಎಲ್ಟಿಡಿ ಕಾರ್ಖಾನೆಯ 20 ಕಾರ್ಮಿಕರು ರಾಸಾಯನಿಕ ಸೋರಿಕೆಯಿಂದ ಗಾಯಗೊಂಡರು, ಎನ್‌ಡಿಆರ್‌ಎ್ ತಂಡ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಲಾಯಿತು. ಈ ರಾಸಾಯನಿಕ ದುರಂತ ಅಣುಕು ಪ್ರದರ್ಶನದಿಂದ 3 ಕಾರ್ಖಾನೆಗಳಿಂದ ಸುಮಾರು 400 ಕಾರ್ಮಿಕರನ್ನು ರಕ್ಷಿಸಿ ವಾಗಟ ಗ್ರಾಮದ ಪುನರ್ವಸತಿ ಕೇಂದ್ರ ಕ್ಕೆ ಸ್ಥಳಾಂತರಿಸಲಾಯಿತು.
ಪ್ರಾಣಾಪಾಯ ಇಲ್ಲ: ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದರು. ಅಣಕು ಪ್ರದರ್ಶನದಲ್ಲಿ ಕಾರ್ಖಾನೆಗಳ ಜಂಟಿ ನಿರ್ದೇಶಕ ನವನೀತ್‌ಮೋಹನ್,, ಹೊಸಕೋಟೆ ತಹಸೀಲ್ದಾರ್ ಸೋಮಶೇಖರ್, ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣಸ್ವಾಮಿ, ಕಾರ್ಖಾನೆಗಳ ಉಪನಿರ್ದೇಶಕ ತಿಮ್ಮರಾಜು ವಿ, ಜನರಲ್ ಮ್ಯಾನೇಜರ್ ಸುಂದರ್, ವಿಪತ್ತು ತಜ್ಞೆ ಸ್ಮಿತಾ ಮತ್ತಿತರರು ಭಾಗವಹಿಸಿದ್ದರು.