ಅಣು ವಿದ್ಯುತ್ ಸ್ಥಾವರ ಪ್ರಸ್ತಾವನೆ ಕೈಬಿಡಲಿ

18 GVT 02
ಗಂಗಾವತಿ ಗ್ರೇಡ್ 2 ತಹಸೀಲ್ದಾರ್ ಮಹಾಂತಗೌಡ ಗೌಡರ್‌ಗೆ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಮನವಿ ಸಲ್ಲಿಸಿದರು. ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ, ಪದಾಧಿಕಾರಿಗಳಾದ ಚಂದ್ರು ನಿಸರ್ಗ, ಜಡಿಯಪ್ಪ,ಜಿ.ದುರ್ಗೇಶ ಹೊಸಳ್ಳಿ ಇತರರಿದ್ದರು.
Published on

ಗಂಗಾವತಿ: ಖಾಲಿ ಹುದ್ದೆಗಳ ಭರ್ತಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ನಗರದ ತಾಲೂಕು ಆಡಳಿತ ಸೌಧದ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.

ತಾಲೂಕು ಸಮಿತಿ ಸದಸ್ಯರೊಂದಿಗೆ ಪ್ರತಿಭಟಿಸಿದ ನಂತರ ಬೇಡಿಕೆ ಮನವಿಯನ್ನು ಗ್ರೇಡ್ 2 ತಹಸೀಲ್ದಾರ್ ಮಹಾಂತಗೌಡ ಗೌಡರ್‌ಗೆ ಸಲ್ಲಿಸಿದರು. ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ, ಶಾಲೆಗಳಲ್ಲಿ ಶಿಕ್ಷಕ ಹುದ್ದೆ ಖಾಲಿಯಿದ್ದು, ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ದೊರೆಯುತ್ತಿಲ್ಲ. ಉಚಿತ ಬೈಸಿಕಲ್ ಯೋಜನೆ ಸ್ಥಗಿತದಿಂದ ಗ್ರಾಮೀಣ ಭಾಗದ ಮಕ್ಕಳು ಕಾಲ್ನಡಿಗೆಯಲ್ಲಿ ಶಾಲೆಗೆ ಹೋಗಬೇಕಿದೆ.

ತಾಲೂಕಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಣು ವಿದ್ಯುತ್ ಸ್ಥಾವರ ಪ್ರಸ್ತಾವನೆ ಕೈಬಿಡಬೇಕು. ಅಂಜನಾದ್ರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ, ಪುಣ್ಯಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಯೋಜನೆ ರೂಪಿಸಬೇಕು ಎಂದರು. 371(ಜೆ) ವಿಧೇಯಕ ಸಮರ್ಪಕ ಅನುಷ್ಠಾನ,

ಸರ್ಕಾರಿ ಕಚೇರಿಗಳಿಗೆ ಸ್ವಂತ ಕಟ್ಟಡ, ಹೊಸ ತಾಲೂಕುಗಳಲ್ಲಿ ಎಲ್ಲ ಕಚೇರಿಗಳ ಆರಂಭ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಪದಾಧಿಕಾರಿಗಳಾದ ರಾಘು ಕಡೆಬಾಗಿಲು, ಬಸವರಾಜ ನಾಯಕ, ಶಬ್ಬೀರ್ ಹುಸೇನ್, ರಮೇಶ, ನರಸಪ್ಪ, ಚಂದ್ರು, ಮುತ್ತಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net