

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಶಿವ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆ 19ರಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸುವರು. ಆನಂದಧಾಮ ಸಿದ್ಧಾರೂಡಮಠದ ಡಾ. ಆನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರಾದ ಅಬ್ಬಯ್ಯ ಪ್ರಸಾದ, ಎನ್.ಎಚ್ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಎಸ್.ವಿ.ಸಂಕನೂರ, ಪ್ರದಿಪ ಶೆಟ್ಟರ, ಮೇಯರ್ ರಾಮಪ್ಪ ಬಡಿಗೇರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಇತರರು ಆಗಮಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ.
ಹುಬ್ಬಳ್ಳಿಯ ಸರ್ಕಾರಿ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಉಮಾದೇವಿ ಉಪನ್ಯಾಸ ನೀಡುವರು.