ಪುಣ್ಯಾರಾಧನೆ 6ರಂದು

nulvi
Published on

ಹುಬ್ಬಳ್ಳಿ: ಭಾವೈಕ್ಯತೆಯ ಹರಿಕಾರ ಬಾಳೆಹೊನ್ನೂರಿನ ಲಿಂ. ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳ ಪುಣ್ಯಾರಾಧನೆ ಕಾರ್ಯಕ್ರಮ ಅ. 6ರಂದು ತಾಲೂಕಿನ ನೂಲ್ವಿ ಗ್ರಾಮದಲ್ಲಿ ಆಯೋಜಿಸಲಾಗಿದೆ.

ಬೆಳಗ್ಗೆ ಲಿಂ. ಶ್ರೀಗಳ ಶಿಲಾಮೂರ್ತಿಗೆ ರುದ್ರಾಭಿಷೇಕ, ವಿಶೇಷ ಪೂಜೆ ಬಳಿಕ ಗ್ರಾಮದಲ್ಲಿ ಶ್ರೀಗಳ ಭಾವಚಿತ್ರದ ಮೆರವಣಿಗೆ ಸಕಲ ವಾದ್ಯವೃಂದದೊಂದಿಗೆ ನಡೆಯಲಿದೆ. ತದನಂತರ ಮಹಾಪ್ರಸಾದ ಇರಲಿದೆ. ಸಂಜೆ 5 ಗಂಟೆಗೆ ಧರ್ಮಸಭೆ ಜರುಗಲಿದ್ದು, ಮುಕ್ತಿಮಂದಿರದ ಶ್ರೀ ವಿಮಲ ರೇಣುಕಾ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಶ್ರೀಗಳವರ ಕುರಿತು ಭಕ್ತಿ ಗೀತೆ, ಉಪನ್ಯಾಸ, ವಿವಿಧ ಧಾರ್ವಿುಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಂಕರಗೌಡ್ರು ಸಿದ್ದನಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net