

ಕೊಪ್ಪಳ: ಶುಶ್ರೂಷಕಿಗೆ ಕಿರುಕುಳ ನೀಡಿದ ಸಂಬಂಧ ತಾಲೂಕಿನ ಹಿರೇಸಿಂದೋಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ರಮೇಶ ಮೂಲಿಮನಿ ವಿರುದ್ಧ ಅಳವಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಶ್ರೂಷಕಿ ಅಮಿನಾ ಬೇಗಂ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ. 2017ರಲ್ಲಿ ಆರೋಗ್ಯ ಕೇಂದ್ರದಲ್ಲಿ ತಾನು ಕರ್ತವ್ಯಕ್ಕೆ ಹಾಜರಾಗಿದ್ದು, 2022ರಿಂದ ವೈದ್ಯ ಕಿರುಕುಳ ನೀಡುತ್ತಿದ್ದಾನೆ. ಇಲ್ಲಸಲ್ಲದ ಆರೋಪ ಮಾಡಿ ವೈಯಕ್ತಿಕ ಜೀವನಕ್ಕೆ ತೊಂದರೆ ನೀಡಿದ್ದಾನೆ. 8 ತಿಂಗಳಿಂದ ಬೇರೆ ಆಸ್ಪತ್ರೆಗೆ ಎರವಲು ಸೇವೆ ಮೇಲೆ ನಿಯೋಜಿಸಲಾಗಿದೆ. ತನ್ನೊಂದಿಗೆ ಸಹಕರಿಸದಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, ಅಶ್ಲೀಲವಾಗಿ ಮಾತನಾಡಿದ್ದಾನೆ. ಕಿರುಕುಳ ತಾಳದೆ 2022ರ ಅಕ್ಟೋಬರ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
" ವೈದ್ಯನ ವಿರುದ್ಧ ಶುಶ್ರೂಷಕಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಘಟನೆ ಸಂಬಂಧ ಡಿಎಚ್‌ಒಗೆ ಪತ್ರ ಬರೆದು ವಿವರಣೆ ಕೇಳಲಾಗಿದೆ. ಅವರಿಂದ ಉತ್ತರ ಬಂದಿಲ್ಲ. ಶುಶ್ರೂಷಕಿ ಅಮಿನಾ ಬೇಗಂ ಪತಿ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಸೂಕ್ತ ತನಿಖೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು' ಕೊಪ್ಪಳ ಎಸ್ಪಿ ಯಶೋದಾ ವಂಟಗೋಡಿ ತಿಳಿಸಿದರು.