ನರ್ಸಿಂಗ್ ವಿದ್ಯಾರ್ಥಿಗಳಿಗೆ ದೀಕ್ಷಾರಂಭ

IMG-20241109-WA0020.jpg
Published on

ಹುಬ್ಬಳ್ಳಿ: ಧಾರವಾಡದ ಮಹಾಗಣಪತಿ ಕಾಲೇಜ್ ಆಫ್ ನರ್ಸಿಂಗ್ ವತಿಯಿಂದ ನಗರದ ಅಶೋಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಥಮ ಸೆಮಿಸ್ಟರ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ದೀಕ್ಷಾರಂಭ (ಇಂಡಕ್ಶನ್) ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ನರ್ಸಿಂಗ್ ವಿದ್ಯಾರ್ಥಿಗಳ ಶೈಕ್ಷಣಿಕ ಪಯಣ ಆರಂಭೋತ್ಸವಕ್ಕೆ ಗದಗ ಸಂಕನೂರ ಇನ್ ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲ ಡಾ. ಮೀನಾ ದೇವಾಂಗಮಠ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಎಸ್ಜಿಇ ಟ್ರಸ್ಟ್ ಅಧ್ಯಕ್ಷ ಡಾ. ಅಶೋಕ ಬಂಗಾರಶೆಟ್ಟರ, ನಿರ್ದೇಶಕರಾದ ವರ್ಷಾ ಬಂಗಾರಶೆಟ್ಟರ, ಬಸವರಾಜ ಅಕ್ಕಿ, ಮಹಾಗಣಪತಿ ನರ್ಸಿಂಗ್ ಕಾಲೇಜಿನ ಉಪಪ್ರಾಂಶುಪಾಲ ಸಚಿನ್ ಕಲ್ಪಾಲ್, ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net