

ಉಡುಪಿ: ಖಾಸಗಿ ಅರೆವೈದ್ಯಕಿಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಉಡುಪಿಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಿದೆ.
ಬೆಳಗ್ಗೆ ಸಿಐಡಿ ಡಿವ್ಯೆಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಟನೆ ಬಗ್ಗೆ ಮಾಹಿತಿ ಪಡೆದಿದೆ. ಜಿಲ್ಲಾ ಪೊಲೀಸ್ ವರಿಫಿ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ತನಿಖಾಧಿಕಾರಿಯಾಗಿದ್ದ ಬೆಳ್ಳಿಯಪ್ಪ ಸಹಿತ ಮಲ್ಪೆ ಠಾಣೆಯ ಪೊಲೀಸರು ತನಿಖೆಯ ವರದಿಗಳನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. ಸಾಯಂಕಾಲ ಸಿಐಡಿ ಎಸ್ಪಿ ರಾವೇಂದ್ರ ಹೆಗಡೆ ಬೆಂಗಳೂರಿನಿಂದ ಆಗಮಿಸಿದ್ದು, 4 ದಿನಗಳ ಕಾಲ ಟನೆಗೆ ಬಗ್ಗೆ ವಿಸತ ತನಿಖೆ ಕೈಗೊಳ್ಳಲಿದ್ದಾರೆ.