

ಚಿಕ್ಕೋಡಿ: ನರ್ಸಿಂಗ್ ವಿದ್ಯಾರ್ಥಿಗಳಿಗೆ ಅನುಕಂಪ, ಕಾಳಜಿ ಹಾಗೂ ಜವಾಬ್ದಾರಿ ಅವಶ್ಯಕವಾಗಿದೆ ಎಂದು ದಿಯಾ ಆಸ್ಪತ್ರೆಯ ಸಂಸ್ಥಾಪಕ ಡಾ. ಸಂಜೀವ ಪಾಟೀಲ ಹೇಳಿದರು.
ಇಲ್ಲಿನ ಸಿಎಲ್‌ಇ ಸಂಸ್ಥೆಯ ಶಾಂತಾದೇವಿ ಕವಟಗಿಮಠ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ದೀಪ ಪ್ರಜ್ವಲನೆ ಹಾಗೂ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವಿಪುಲ ಅವಕಾಶಗಳಿವೆ. ಗುಣಮಟ್ಟದ ಶಿಕ್ಷಣ ಪಡೆದು ಬದುಕು ರೂಪಿಸಿಕೊಳ್ಳಬೇಕು ಎಂದರು.
ಬಿಮ್ಸ್ ನರ್ಸಿಂಗ್ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ನಾಮದೇವ ಮಾಳಗಿ ಮಾತನಾಡಿ, ನರ್ಸಿಂಗ್ ವೃತ್ತಿ ಉದಾತ್ತ ಸೇವೆಯಾಗಿದೆ ಎಂದು ಹೇಳಿದರು. ಪ್ರಾಚಾರ್ಯ ಸಿ.ಎಸ್.ಮಠಮತಿ ಮಾತನಾಡಿದರು. ಸಂಸ್ಥೆಯ ಜಂಟಿ ಕಾರ್ಯದರ್ಶಿ ಎನ್.ಎಸ್.ವಂಟಮುತ್ತೆ, ಕೆಎಲ್‌ಇ ಆಸ್ಪತ್ರೆಯ ಶುಶ್ರೂಷ ಅಧೀಕ್ಷಕ ಚಂದ್ರಕಾಂತ ಕುಂಬಾರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.