ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ; ನೇಣು ಹಾಕಿಕೊಂಡ ನರ್ಸಿಂಗ್ ವಿದ್ಯಾರ್ಥಿನಿ..

death
ಸಾಂದರ್ಭಿಕ ಚಿತ್ರ
Published on

ತುಮಕೂರು: ರಾಜ್ಯದಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಮತ್ತೊಂದು ಆತ್ಮಹತ್ಯೆಯ ಪ್ರಕರಣ ಬೆಳಕಿಗೆ ಬಂದಿದೆ. ಅಂದಹಾಗೆ ಇದು ಪಿಯುಸಿ ಫಲಿತಾಂಶಕ್ಕೆ ಸಂಬಂಧಿತ ಆತ್ಮಹತ್ಯೆ ಪ್ರಕರಣವಲ್ಲ.

ಪಿಯುಸಿ ಫಲಿತಾಂಶದ ಕಾರಣಕ್ಕೆ ರಾಜ್ಯದಲ್ಲಿ ಇಂದು ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮೊರೆಹೋದ ಪ್ರಕರಣಗಳು ವರದಿಯಾಗಿವೆ. ಅದಲ್ಲದೆಯೂ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚೆಗೆ ಮೇಲಿಂದ ಮೇಲೆ ಕೇಳಿ ಬರುತ್ತಿದ್ದು, ಈಗ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಜೀವ ಕಳೆದುಕೊಂಡಿದ್ದಾಳೆ.

ತುಮಕೂರಿನ ಶ್ರೀದೇವಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ನಂದಿನಿ (21) ಆತ್ಮಹತ್ಯೆ ಮಾಡಿಕೊಂಡ ಯುವತಿ. ತುಮಕೂರು ಜಿಲ್ಲೆಯ ಪಾವಗಡ ಮೂಲದ ನಂದಿನಿ, ನೇಣು ಹಾಕಿಕೊಂಡು ಸಾವಿಗೀಡಾಗಿದ್ದಾಳೆ. ಆತ್ಮಹತ್ಯೆಗೆ ಕಾರಣವೇನು ಎಂಬ ಕುರಿತು ಖಚಿತ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ. ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net