ನೂತನ ಕುಮಾರಿ ಕರ್ತವ್ಯಕ್ಕೆ ಹಾಜರು

IMG-20221013-WA0063
Published on

ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರು ಗುರುವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರಿ ಕರ್ತವ್ಯಕ್ಕೆ ಹಾಜರಾದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರ ಸ್ವೀಕರಿಸಿದ ಅವರು, ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ ಇಚ್ಛೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net