ರಾಜ್ಯದಲ್ಲಿ ಇನ್ನೂ 10 ಸಾವಿರ ಅತಿಥಿ ಶಿಕ್ಷಕರ ನೇಮಕ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

2
Published on

ಮಂಡ್ಯ: ರಾಜ್ಯದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಾರದೆಂದು ಇನ್ನೂ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಉಪಹಾರ ಯೋಜನೆಯಡಿ 1 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪೂರಕ ಪೋಷಣ ಪೌಷ್ಟಿಕ ಆಹಾರ(ಮೊಟ್ಟೆ, ಚಿಕ್ಕಿ, ಬಾಳೆಹಣ್ಣು) ವಿತರಣೆ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಸರ್ಕಾರದ ವತಿಯಿಂದ 30 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಅಂತೆಯೇ ಮತ್ತೆ 10 ಸಾವಿರ ಅತಿಥಿ ಶಿಕ್ಷಕರನ್ನು ಪಡೆಯಲು ಸಿಎಂ ಸೂಚಿಸಿದ್ದಾರೆ. ಇನ್ನು ಶಿಕ್ಷಣ ಇಲಾಖೆಗೆ ವರ್ಗಾವಣೆ ಕೋರಿ ಸುಮಾರು 90 ಸಾವಿರ ಅರ್ಜಿ ಬಂದಿತ್ತು. ಈ ಪೈಕಿ 31 ಸಾವಿರ ಶಿಕ್ಷಕರನ್ನು ಕೌನ್ಸಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಧಿಕಾರಿ ಹಾಗೂ ಜನಪ್ರತಿನಿಧಿಗಳನೊಳಗೊಂತೆ ಸಭೆ ನಡೆಸಿ ಶಿಕ್ಷಣ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net