ವಂಡ್ಸೆ ಸರ್ಕಾರಿ ಶಾಲೆಯಲ್ಲಿ ಪೋಷಣ್ ಅಭಿಯಾನ

gan (7)
Published on

ಕುಂದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ವಂಡ್ಸೆ ವಲಯ, ವಂಡ್ಸೆ ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ವಂಡ್ಸೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಣ್ ಅಭಿಯಾನ ನಡೆಯಿತು. ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಟಿ.ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ, ಕಾರ್ಯಕ್ರಮದ ಉದ್ದೇಶ ಹಾಗೂ ಸಮತೂಕದ ಆಹಾರದ ಬಗ್ಗೆ ಮಾಹಿತಿ ನೀಡಿದರು. ವಂಡ್ಸೆ ಗ್ರಾಪಂ ಅಧ್ಯಕ್ಷೆ ಗೀತಾ ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು. ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಂ.ಜಿ.ರಾಮ ಅವರು ಗರ್ಭಿಣಿ-ಬಾಣಂತಿಯರು ಮತ್ತು ಮಕ್ಕಳಿಗೆ ಬೇಕಾದ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು. ವಂಡ್ಸೆ ಗ್ರಾಪಂ ಉಪಾಧ್ಯಕ್ಷ ಗೋವರ್ದನ್ ಜೋಗಿ, ನಿರಾಮಯ ಸೊಸೈಟಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಹಕ್ಲಾಡಿ ಗ್ರಾಮ ಪಂಚಾಯಿತಿ ಸದಸ್ಯ ಅಶೋಕ್ ಪೂಜಾರಿ, ವಂಡ್ಸೆ ಗ್ರಾಪಂ ಸದಸ್ಯರಾದ ಶಶಿಕಲಾ ಎಸ್., ಸುಬ್ಬು, ಸಂಜೀವಿನಿ ಸಂಘದ ಅಧ್ಯಕ್ಷೆ ಸಲ್ಮಾ, ಸ್ತ್ರೀಶಕ್ತಿ ಸಂಘದ ಪದಾಧಿಕಾರಿ ಜುಲೇಖ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಅಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ವಿದ್ಯಾರ್ಥಿ ಪಾಲಕರು ಉಪಸ್ಥಿತರಿದ್ದರು. ಆತ್ರಾಡಿ ಅಂಗನವಾಡಿ ಕಾರ್ಯಕರ್ತೆ ಅಕ್ಕಮ್ಮ ಸ್ವಾಗತಿಸಿದರು. ಮೇಲ್ವಿಚಾರಕಿ ಭಾಗ್ಯವತಿ ಪ್ರಸ್ತಾವಿಕ ಮಾತುಗಳನ್ನಾಡಿದರು. ದೀಪಿಕಾ ವಂದಿಸಿದರು. ಶ್ರೀಲಕ್ಷ್ಮೀ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net