ಭೈರನಹಟ್ಟಿ ಗ್ರಾಮದಲ್ಲಿ ಪೋಷಣ ಅಭಿಯಾನ

05 NRD-2
Published on

ನರಗುಂದ: ಮಹಿಳೆಯರು, ಮಕ್ಕಳು, ಗರ್ಭಿಣಿ, ಬಾಣಂತಿಯರ ಆರೋಗ್ಯ ಸುಧಾರಣೆ. ಅಪೌಷ್ಟಿಕತೆ ಹೋಗಲಾಡಿಸಲು ತಾಲೂಕಿನಾದ್ಯಂತ ಪೋಷಣ್ ಮಾಸಾಚರಣೆ ಆಯೋಜಿಸಲಾಗಿದೆ. ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪೋಷಣ ಅಭಿಯಾನದ ಕಾರ್ಯಕ್ರಮ ಸಂಯೋಜಕ ಮಂಜುನಾಥ ಗುಗ್ಗರಿ ಹೇಳಿದರು.
ತಾಲೂಕಿನ ಭೈರನಹಟ್ಟಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ 40ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಪೋಷಣ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪಾ ಗಂಧದ ಮಾತನಾಡಿ, ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾಗಿರುವ ಮಕ್ಕಳ ಎತ್ತರ ಮತ್ತು ತೂಕ ಪರಿಶೀಲಿಸಿ ಸಾಧಾರಣ ಹಾಗೂ ಕಡಿಮೆ ತೂಕ ಹೊಂದಿರುವ ಮಕ್ಕಳಿಗೆ ಪೌಷ್ಟಿಕ ಆಹಾರದ ಮಿಶ್ರಣ ನೀಡಲಾಗುತ್ತಿದೆ ಎಂದರು. ಭೈರನಹಟ್ಟಿ ಗ್ರಾಪಂ ಸದಸ್ಯ ಶರಣಬಸಪ್ಪ ನರಸಾಪೂರ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯ ಜ್ಞಾನೇಶ ಮುನೇನಕೊಪ್ಪ, ಭೈರನಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಶ್ರುತಿ ಸಂಗಳ, ಅಂಗನವಾಡಿ ಮೇಲ್ವಿಚಾರಕಿ ಅನ್ನಪೂರ್ಣಾ ಹಡಪದ, ಬಾಲವಿಕಾಸ ಸಮಿತಿ ಅಧ್ಯಕ್ಷೆ ರೇಣುಕಾ ಬೆನ್ನೂರ, ಆರೋಗ್ಯ ಇಲಾಖೆಯ ಈರಣ್ಣ ಗುಳ್ಳನ್ನವರ (ಎಚ್‌ಪಿಒ), ಸುಮಿತ್ರಾ ಜಗಲಿ (ಪಿಎಚ್‌ಒ), ಇತರರಿದ್ದರು. ಶರಣಮ್ಮ ರಾಯನಗೌಡ್ರ ಸ್ವಾಗತಿಸಿದರು, ರೇಣುಕಾ ಹುಜರತ್ತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net