ಪೌಷ್ಟಿಕ ಆಹಾರ ವಿತರಣೆ ವಿದ್ಯಾರ್ಥಿಗಳಿಗೆ ಸಹಾಯಕ: ಸ್ವಾಮಿ ವಿವೇಕಾನಂದ ಸಂಸ್ಥೆಯ ಶಿವರಾಜ್ ಹೊಮ್ಮರಡಿ ಹೇಳಿಕೆ

NMT WEB
Published on

ನ್ಯಾಮತಿ: ಸರ್ಕಾರವು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿರುವುದು ಉತ್ತಮ ಕಾರ್ಯ ಎಂದು ಸ್ವಾಮಿ ವಿವೇಕಾನಂದ ಸಂಸ್ಥೆಯ ಗೌರವಾಧ್ಯಕ್ಷ ಶಿವರಾಜ್ ಹೊಮ್ಮರಡಿ ಹೇಳಿದರು.

ಪಟ್ಟಣದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ಬಾಳೆಹಣ್ಣು, ಮೊಟ್ಟೆ, ಶೇಂಗಾ ಚಿಕ್ಕಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಮಧ್ಯಾಹ್ನದ ಬಿಸಿಯೂಟದ ಜತೆಗೆ ಹಾಲು, ಬಾಳೆಹಣ್ಣು ಇತರೆ ಪೌಷ್ಟಿಕ ಆಹಾರ ನೀಡುತ್ತಿದ್ದು, ಬಡಮಕ್ಕಳಿಗೆ ತುಂಬ ಅನುಕೂಲವಾಗಿದೆ ಎಂದರು.

ಮಾಜಿ ಶಾಸಕ ಡಾ.ಡಿ.ಬಿ.ಗಂಗಪ್ಪ, ಸಂಸ್ಥೆಯ ಕಾರ್ಯದರ್ಶಿ ರವಿ ತೋಂಟದಾರ್ಯ, ಮುಖ್ಯ ಶಿಕ್ಷಕಿ ಶಶಿಕಲಾ, ಶಿವಮೂರ್ತಿ, ಮಲ್ಲೇಶಪ್ಪ, ಶಂಕ್ರಪ್ಪ, ಮೇಘರಾಜ್, ಜಗದೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net