ಪೌಷ್ಟಿಕ ಆಹಾರ ಪ್ರದರ್ಶನ, ಸೀಮಂತ

food-2
ಪೌಷ್ಟಿಕ ಆಹಾರ ಪ್ರದರ್ಶನ ಮತ್ತು ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಹೆಮ್ಮಾಡಿ ಗ್ರಾಪಂ ಸಭಾಭವನದಲ್ಲಿ ನಡೆಯಿತು.
Published on

ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕುಂದಾಪುರ ವತಿಯಿಂದ ಹೆಮ್ಮಾಡಿ ಗ್ರಾಮ ಮಟ್ಟದ ಪೋಷಣ್ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಪೌಷ್ಟಿಕ ಆಹಾರ ಪ್ರದರ್ಶನ ಮತ್ತು ಗರ್ಭಿಣಿಯರಿಗೆ ಸೀಮಂತ ಹೆಮ್ಮಾಡಿ ಗ್ರಾಪಂ ಸಭಾಭವನದಲ್ಲಿ ಸೋಮವಾರ ನಡೆಯಿತು.
ಹೆಮ್ಮಾಡಿ ಪಿಡಿಒ ರಿಯಾಜ್ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿ ಸುಮಾ ಪೋಷಣ್ ಅಭಿಯಾನ ಕಾರ್ಯಕ್ರಮದ ಮಹತ್ವದ ಕುರಿತು ವಿವರಿಸಿದರು. ಆರೋಗ್ಯ ಇಲಾಖೆ ಸಿಬ್ಬಂದಿ ಸುಜಾತಾ, ಸಿಎಚ್‌ಒ ವತ್ಸಲಾ ಅವರು ಪೌಷ್ಟಿಕ ಆಹಾರ ಸೇವನೆ ಕುರಿತು ಮಾಹಿತಿ ನೀಡಿದರು. ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರಾದ ಪಾರ್ವತಿ, ಗುಲಾಬಿ, ಇಂದಿರಾ, ಅಶ್ವಿನಿ, ವಿಜಯಲಕ್ಷ್ಮೀ, ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಲಲಿತಾ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net