ಪೌಷ್ಟಿಕ ಆಹಾರ ಸೇವನೆಗೆ ಆದ್ಯತೆ ನೀಡಿ - ಆಪ್ತ ಸಮಾಲೋಚಕ ಅರುಣ್ ಕುಮಾರ್ ಸಲಹೆ

Menedala Immunization of children under the National Adolescent Health Programme
ತಾವರಗೇರಾ ಸಮೀಪದ ಮೆಣೇಧಾಳ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶನಿವಾರ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿ ಮಕ್ಕಳಿಗೆ ಚುಚ್ಚುಮದ್ದು ನೀಡಲಾಯಿತು.
Published on

ತಾವರಗೇರಾ: ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಋತುಚಕ್ರ, ಅಪೌಷ್ಟಿಕತೆ, ಖಿನ್ನತೆ, ಕಲಿಕಾ ಸಮಸ್ಯೆಗಳು ಕಂಡು ಬಂದರೆ ಸಮುದಾಯ ಆರೋಗ್ಯ ಕೇಂದ್ರದ ಸ್ನೇಹ ಕ್ಲಿನಿಕ್‌ಗೆ ಭೇಟಿ ನೀಡಿ ಪರಿಹಾರ ಕಂಡುಕೊಳ್ಳಬೇಕು ಎಂದು ಆಪ್ತ ಸಮಾಲೋಚಕ ಅರುಣ್ ಕುಮಾರ್ ಹೇಳಿದರು.

ಸಮೀಪದ ಮೆಣೇಧಾಳ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹದಿಹರೆಯದಲ್ಲಿ ಮಕ್ಕಳು ಅನೇಕ ತೊಂದರೆಗಳಿಗೆ ಒಳಗಾಗುತ್ತಿದ್ದು, ಅವುಗಳನ್ನು ಪರಿಹರಿಸಲು ಪಾಲಕರು ಮುಂದಾಗಬೇಕು. ವೈಯಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ ಮತ್ತು ಕಬ್ಬಿಣಾಂಶದ ಮಾತ್ರೆಗಳ ಸೇವನೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ವಸತಿ ಶಾಲೆಯ ಪ್ರಾಚಾರ್ಯ ಕೊಟ್ರೇಶ ತಳವಾರ, ಆರೋಗ್ಯ ನಿರೀಕ್ಷಣಾಧಿಕಾರಿ ಅನ್ವರ್ ಸಾಬ್, ಸಮುದಾಯ ಆರೋಗ್ಯಾಧಿಕಾರಿ ರಮೇಶ ಅಳ್ಳಳ್ಳಿ, ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಮಂಜುಳಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net