

ವಿಜಯವಾಣಿ ಸುದ್ದಿಜಾಲ ಕೋಟ
ಪೌಷ್ಟಿಕ ಆಹಾರ ಹಾಗೂ ಸಾಂಪ್ರದಾಯಿಕ ಅಡುಗೆಗಳ ಬಗ್ಗೆ ಅರಿತು ಆಹಾರವನ್ನು ಹಿತ ಮಿತವಾಗಿ ಬಳಸಬೇಕು ಎಂದು ಮನೋಶಾಸ್ತ್ರಜ್ಞೆ ಡಾ.ಜಯಶ್ರೀ ಭಟ್ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ತಾಲೂಕು ಘಟಕ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ಪಾಂಡೇಶ್ವರ ವಲಯದ ಸಾಸ್ತಾನ ಕಾರ್ಯಕ್ಷೇತ್ರದ ವಿದ್ಯೋದಯ ಶಾಲೆಯಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯಡಬೆಟ್ಟು ವಿದ್ಯೋದಯ ಶಾಲೆ ಮುಖ್ಯ ಶಿಕ್ಷಕಿ ಇಂದಿರಾ, ವಲಯ ಅಧ್ಯಕ್ಷೆ ರಾಧಾ, ಸಾಸ್ತಾನ ಒಕ್ಕೂಟ ಅಧ್ಯಕ್ಷೆ ಗಂಗಾವತಿ ರಾವ್, ವಿಪತ್ತು ಘಟಕದ ಸದಸ್ಯೆ ರೇಣುಕಾ, ಪಾಂಡೇಶ್ವರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಕಲ್ಪನಾ ದಿನಕರ್, ತಾಲೂಕು ವಿಚಕ್ಷಣಾಧಿಕಾರಿ ಅಶೋಕ್, ಸಮನ್ವಯ ಅಧಿಕಾರಿ ಪುಷ್ಪಲತಾ, ವಲಯ ಮೇಲ್ವಿಚಾರಕಿ ಜಯಲಕ್ಷ್ಮೀ, ಸೇವಾ ಪ್ರತಿನಿಧಿ ಶೋಭಾ, ಸದಸ್ಯರು ಉಪಸ್ಥಿತರಿದ್ದರು.
ಸಾಂಪ್ರದಾಯದ ಅಡುಗೆಗಳ ಪ್ರಾತ್ಯಕ್ಷಿಕೆ ನಡೆಸಲಾಯಿತು. ಧರ್ಮಸ್ಥಳದಿಂದ ಮಂಜೂರು ಮಾಡಿದ ಸುಜ್ಞಾನ ನಿಧಿ ಮಂಜೂರಾತಿ ಪತ್ರವನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಲಾಯಿತು.