ಮುಳಿಬೆಟ್ಟು ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ

New Project (20)
Published on

ಮೂಡುಬಿದಿರೆ: ಮುಳಿಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮವನ್ನು ಗ್ರಾಪಂ ಸದಸ್ಯ ವಲೇರಿಯನ್ ಕುಟಿನ್ಹ ಉದ್ಘಾಟಿಸಿದರು.

ದ.ಕ. ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರ ಸಹಭಾಗಿತ್ವದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ ಇರುವೈಲು ಗ್ರಾಪಂ ವ್ಯಾಪ್ತಿಯ ಐದು ಅಂಗನವಾಡಿ ಕೇಂದ್ರಗಳ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬಡಗ ಎಡಪದವು ಗ್ರಾಪಂ ಉಪಾಧ್ಯಕ್ಷ ಚಂದ್ರಹಾಸ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಪುಷ್ಪಲತಾ, ಸಿ.ಎಚ್.ಒ ಲೆನಿಟಾ, ಪಿ.ಎಚ್.ಸಿ.ಒ. ಗೀತಾ, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ವೀಣಾ ನಿರೂಪಿಸಿದರು. ರೇಣುಕಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net