ಬೈಕ್​ಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿತು ಸರ್ಕಾರಿ ಬಸ್​!

Bus palti
Published on

ಹಾವೇರಿ: ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್​ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕದ ಹಳ್ಳದಲ್ಲೇ ಉರುಳಿಬಿದ್ದಿರುವ ಘಟನೆ ನಡೆದಿದೆ.

ಜಿಲ್ಲೆಯ ಶಿಗ್ಗಾವಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಂದಕಕ್ಕೆ ಬಸ್​ ಉರುಳಿದ್ದು, ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾವೇರಿ ಬಸ್​ ಡಿಪೋಗೆ ಸೇರಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್​​​ ಉರುಳಿಬಿದ್ದಿದೆ. ಘಟನೆಗೆ ಚಾಲಕನ ಅಜಾಗರೂಕತೆ ಹಾಗೂ ವೇಗದ ಚಾಲನೆಯೇ ಕಾರಣ ಎಂದು ಹೇಳಲಾಗಿದೆ.

ಬಸ್​​ನಲ್ಲಿದ್ದ ನಾಲ್ಕು ಪ್ರಯಾಣಿಕರು ಗಾಯಗೊಂಡಿದ್ದು, ಬಸ್​ ಮುಂದೆ ಚಲಿಸುತ್ತಿದ್ದ ಬೈಕ್​ ಸವಾರ ಕೂಡ ಗಾಯಗೊಂಡಿದ್ದಾನೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net