ಬಸ್ ಪಾಸ್ ವಿತರಣಾ ವ್ಯವಸ್ಥೆ ಪರಿಶೀಲನೆ

cbt visit
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದಿಂದ ಕರ್ನಾಟಕ-ಒನ್ ಹಾಗೂ ಗ್ರಾಮ-ಒನ್ ಕೇಂದ್ರಗಳ ಮೂಲಕ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್​ಗಳನ್ನು ವಿತರಿಸುವ ವ್ಯವಸ್ಥೆ ಮಾಡಲಾಗಿದೆ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಇತ್ತೀಚೆಗೆ ಸಿಬಿಟಿ ಹುಬ್ಬಳ್ಳಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪಾಸ್ ವಿತರಣೆ ವ್ಯವಸ್ಥೆಯನ್ನು ಪರಿಶೀಲಿಸಿದರು.

ರಿಯಾಯಿತಿ ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಿದ ಓರ್ವ ವಿದ್ಯಾರ್ಥಿಗೆ ಬಸ್ ಪಾಸನ್ನು ಅವರು ವಿತರಣೆ ಮಾಡಿದರು. ವಿದ್ಯಾರ್ಥಿ ಬಸ್ ಪಾಸ್ ವಿತರಣೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಹು-ಧಾ ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚಿಸಿದರು.

ಬಳಿಕ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗ ಮತ್ತು ಹುಬ್ಬಳ್ಳಿ ಗ್ರಾಮಾಂತರ ವಿಭಾಗಗಳಿಗೆ ಭೇಟಿ ನೀಡಿ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ಕಛೇರಿಯಲ್ಲಿ ಸಭೆ ನಡೆಸಿದರು. ಸಿಬಿಟಿ ಬಹುಮಹಡಿ ಕಟ್ಟಡದ ವಾಣಿಜ್ಯ ಮಳಿಗೆಗಳನ್ನು, ಬಸ್ ನಿಲ್ದಾಣದ ಸ್ವಚ್ಛತೆಯನ್ನು ಪರಿಶೀಲಿಸಿದರು.

ಪ್ರಸ್ತುತ ಮಳೆಗಾಲ ಪ್ರಾರಂಭವಾಗುತ್ತಿದ್ದು ವಾಹನಗಳ ಮೇಲ್ಛಾವಣಿ ಸೋರದಂತೆ ಕ್ರಮ ಕೈಗೊಳ್ಳಲು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಸಾರಿಗೆ ಕಾರ್ಯಾಚರಣೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚಿಸಿದರು. ನಂತರ ಸಿಬಿಟಿಯಿಂದ ಹೊಸೂರ ಕ್ರಾಸ್​ವರೆಗೆ ಬಿಆರ್​ಟಿಎಸ್ ಬಸ್ಸಿನಲ್ಲಿ ಪ್ರಯಾಣಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net