ವಿಷ ಸೇವಿಸಿ ಯುವಕ ಆತ್ಮಹತ್ಯೆ

suicide
Published on

ನ್ಯಾಮತಿ: ಹೊಟ್ಟೆನೋವಿನ ಸಮಸ್ಯೆಯಿಂದ ಬೇಸತ್ತ ಯುವಕನೊಬ್ಬ ವಿಷ ಸೇವಿಸಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಲೂಕಿನ ಕೋಟೆಹಾಳ್ ವೆಂಕಟೇಶ್ವರ ನಗರದ ಮನೋಹರ (28) ಮೃತ ದುರ್ದೈವಿ. ಪದೇಪದೆ ಬರುವ ಹೊಟ್ಟೆನೋವಿನಿಂದ ಮಾನಸಿಕವಾಗಿ ನೊಂದು ಮದ್ಯವ್ಯಸನಿಯಾಗಿದ್ದ ಈತ ಶನಿವಾರ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತಕ್ಷಣ ಆತನನ್ನು ಹೊಳಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾನೆ. ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net