ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ| Bengaluru

Untitled design
Published on

ಬೆಂಗಳೂರು: ಇಂದು (ಸೆ.11) ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಮೇಶ್ ಬಾಬು, ಆರತಿ ಕೃಷ್ಣ ಎಫ್.ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ಈ ನಾಲ್ವರ ಹೆಸರನ್ನು ನಾಮನಿರ್ದೇಶನ ಮಾಡಲಾಗಿತ್ತು. ಅದರಂತೆ ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಈ ನಾಲ್ವರು ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.

ಇನ್ನೂ ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ, ಡಿ.ಕೆ ಶಿವಕುಮಾರ್ ಸೇರಿದಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್​, ಪಶುಸಂಗೋಪನೆ ಸಚಿವ ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌. ಭೋಸರಾಜು, ಕಾನೂನು ಸಚಿವ ಎಚ್.ಕೆ. ಪಾಟೀಲ್, ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಹಲವು ಪ್ರಮುಖ ಗಣ್ಯರು ಭಾಗಿಯಾಗಿದ್ದರು.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net