ನ.11ರಂದು ನಗರದಲ್ಲಿ ಓಬವ್ವ ಜಯಂತಿ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

Obavva Jayanti pre meeting Mandya
Published on

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ನ.11ರಂದು ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಆದ್ದರಿಂದ ಪೂರ್ವ ಸಿದ್ಧತೆಗೆ ರೂಪುರೇಷೆ ಹಾಕಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರು ವೀರವನಿತೆ ಓಬವ್ವನ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರೇರೆಪಿಸಲು ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10ಗಂಟೆಗೆ ನಗರದ ಮಹಿಳಾ ಕಾಲೇಜಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಅಂತೆಯೇ ನ.18ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕನಕದಾಸ ಜಯಂತಿ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ಅಂಬೇಡ್ಕರ್ ಭವನದವರೆಗೆ ಕನಕದಾಸರ ಭಾವಚಿತ್ರ ಮೆರವಣಿಗೆ ನಡೆಯಲಿದೆ. 11ಗಂಟೆಗೆ ವೇದಿಕೆ ಕಾರ್ಯಕ್ರಮವಿರಲಿದೆ. ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ ನಂದೀಶ, ಹಿರಿಯ ಸಾಹಿತಿ ತೈಲೂರು ವೆಂಕಟಕೃಷ್ಣ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ, ಗ್ರಂಥಾಲಯಾಧಿಕಾರಿ ಕೃಷ್ಣಮೂರ್ತಿ, ಡಿಡಿಪಿಐ ಎಚ್.ಶಿವರಾಮೇಗೌಡ, ಡಿಡಿಪಿಯು ಸಿ.ಚೆಲುವಯ್ಯ, ಬಿಇಒ ಮಹದೇವು, ಶಿಕ್ಷಣಾಧಿಕಾರಿ ಚಂದ್ರಕಾಂತಾ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net