ಜೀವ ರಕ್ಷಣೆಗೆ ರಸ್ತೆ ನಿಯಮಗಳ ಪಾಲನೆ ಮುಖ್ಯ

BYN (1)
Published on

ಬೈಂದೂರು: ನಿರ್ಲಕ್ಷೃತೆ ಅಜಾರೂಕತೆಯೇ ಹೆಚ್ಚಿನ ಅಪಘಾತಗಳಿಗೆ ಕಾರಣವಾಗಿದೆ. ರಸ್ತೆ ನಿಯಮಗಳನ್ನು ಪಾಲಿಸದೆ ಮೋಜು ಮಸ್ತಿಗಾಗಿ ವಾಹನಗಳನ್ನು ಚಲಾಯಿಸುವುದರಿಂದ ರಸ್ತೆ ಅಪಘಾತಗಳಲ್ಲಿ ಮರಣ ಹೊಂದುವವರಲ್ಲಿ ಯುವಕರ ಸಂಖ್ಯೆಯೇ ಹೆಚ್ಚು. ಪ್ರತಿ ವರ್ಷ ವಾಹನ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ನಮ್ಮ ಜೀವಕ್ಕೆ ನಾವೇ ರಕ್ಷಕರಾಗಿ ರಸ್ತೆ ನಿಯಮಗಳನ್ನು ಅಗತ್ಯವಾಗಿ ಪಾಲಿಸಬೇಕು ಎಂದು ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ಜಯಂತ ಅಮೀನ್ ಕೋಡಿ ಹೇಳಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕ, ಅಂಬಲಪಾಡಿ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್, ಉಳ್ಳಾಲ ಮಾರುತಿ ಜನ ಸೇವಾ ಸಂಘ, ಮಾರುತಿ ಯುವಕ ಸಂಘ ಹಾಗೂ ಸರ್ಕಾರಿ ಪಪೂ ಕಾಲೇಜು ಸಹಯೋಗದಲ್ಲಿ ನಡೆದ ರಸ್ತೆ ಸುರಕ್ಷಾ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೈಂದೂರು-ಶಿರೂರು ಘಟಕದ ಅಧ್ಯಕ್ಷ ಸೋಮಶೇಖರ ಜಿ.ಕಸ್ಟಮ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಉಡುಪಿ ಮೋಟಾರು ವಾಹನ ನಿರೀಕ್ಷಕ ಸಂತೋಷ ಶೆಟ್ಟಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಕುರಿತು ಮಾಹಿತಿ ನೀಡಿದರು.

ಬಗ್ವಾಡಿ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಉದಯಕುಮಾರ್ ಹಟ್ಟಿಯಂಗಡಿ, ಮಾರುತಿ ಜನಸೇವಾ ಸಂಘದ ಅಧ್ಯಕ್ಷ ಸಂದೀಪ್ ಪುತ್ರನ್, ಕಾಲೇಜಿನ ಪ್ರಾಂಶುಪಾಲ ಮಂಜುನಾಥ ನಾಯಕ್, ಉಪ ಪ್ರಾಂಶುಪಾಲೆ ಸಂಧ್ಯಾ ಭಟ್, ನಿಕಟಪೂರ್ವಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ, ಉಪಾಧ್ಯಕ್ಷ ರವೀಶ್ ಕೊರವಡಿ ಉಪಸ್ಥಿತರಿದ್ದರು. ಮೊಗವೀರ ಯುವ ಸಂಘಟನೆ ಕಾರ್ಯದರ್ಶಿ ಚಂದ್ರಶೇಖರ ಮೊಗವೀರ ಸ್ವಾಗತಿಸಿದರು. ನಟರಾಜ್ ಬೈಂದೂರು ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net