

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕಾಲೇಜು ರಸ್ತೆಯಲ್ಲಿರುವ ಎಂ.ಎಡ್ ವಿಭಾಗವನ್ನು ಕರ್ನಾಟಕ ವಿಶ್ವವಿದ್ಯಾಲಯದ ಗೋಲ್ಡನ್ ಜ್ಯುಬಿಲಿ ಕಟ್ಟಡಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಗೆ ವಿರೋಧ ವ್ಯಕ್ತವಾಗಿದೆ.
ಅಗತ್ಯ ಪೀಠೋಪಕರಣಗಳೊಂದಿಗೆ ವಿಶ್ವವಿದ್ಯಾಲಯದ ಗೋಲ್ಡನ್ ಜ್ಯುಬಿಲಿ ಕಟ್ಟಡಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ವಿಶ್ವವಿದ್ಯಾಲಯದ ಕಟ್ಟಡ ವಿಭಾಗದ ಸ್ಥಾನಿಕ ಅಭಿಯಂತರರು ಸ್ನಾತಕೋತ್ತರ ಶಿಕ್ಷಣ ಅಧ್ಯಯನ ವಿಭಾಗದ ಸಂಯೋಜಕರಿಗೆ ಇತ್ತೀಚೆಗೆ ಪತ್ರ ಬರೆದಿದ್ದಾರೆ.
ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಎಂ.ಎಡ್ ವಿದ್ಯಾರ್ಥಿಗಳು, ಹಾಲಿ ಕಟ್ಟಡದಲ್ಲಿ ಸಾವಿರಾರು ವಿದ್ಯಾರ್ಥಿಗಳು ಕಲಿತು ಜೀವನ ರೂಪಿಸಿಕೊಂಡಿದ್ದಾರೆ. ವಿಭಾಗದೊಂದಿಗೆ ಭಾವನಾತ್ಮಕ ನಂಟು ಹೊಂದಿದ್ದಾರೆ. ಸ್ಥಳಾಂತರ ವಿಷಯವನ್ನು ಸಿಂಡಿಕೇಟ್ ಸಭೆಯಲ್ಲಿ ಮಂಡಿಸದೆ ಆತುರದ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳಾಂತರದಿAದ ತಾಂತ್ರಿಕ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಆದ್ದರಿಂದ ಈ ನಿರ್ಧಾರವನ್ನು ಕೈ ಬಿಡಬೇಕು ಎಂದು ವಿದ್ಯಾರ್ಥಿಗಳು ಕುಲಸಚಿವ ಡಾ. ಎ. ಚನ್ನಪ್ಪ ಅವರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ.