

ಹುಬ್ಬಳ್ಳಿ: ಹಂತಕನಿಗೆ ಚಿಕಿತ್ಸೆ ನೀಡುತ್ತಿರುವುದರಿಂದ ಮನನೊಂದ ನನ್ನ ಮೊಮ್ಮಗಳು ಯಶೋಧಾ, ನಿನ್ನೆ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಮೃತ ಅಂಜಲಿ ಅಜ್ಜಿ ಗಂಗಮ್ಮ ಅಂಬಿಗೇರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಅಂಜಲಿ ಸಾವಿಗೆ ನ್ಯಾಯ ದೊರೆಯಬೇಕೆಂದು ನಮ್ಮ ಬೆನ್ನಿಗೆ ನಿಂತಿದ್ದಾರೆ. ಆದರೆ, ಹಂತಕನಿಗೆ ಚಿಕಿತ್ಸೆ ನೀಡುತ್ತಿರುವುದು ವಿಷಾದನೀಯ. ಈ ಚಿಕಿತ್ಸೆ ನೀಡುವ ಬದಲು ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ನನ್ನ ಮೊಮ್ಮಗಳು ಆರೋಗ್ಯವಾಗಿದ್ದಾಳೆ ಎಂದರು.