ಸರ್ಕಾರದ ಯೋಜನೆಗಳಿಗೆ ಜನಪ್ರತಿನಿಧಿಗಳ ಫೋಟೋ ಹಾಕುವುದಕ್ಕೆ ಆಕ್ಷೇಪ

Politics
Published on

ಬೆಂಗಳೂರು: ಸರ್ಕಾರದ ಯೋಜನೆಗಳಿಗೆ ಜನಪ್ರತಿನಿಧಿಗಳು ತಮ್ಮಹೆಸರು ಮತ್ತು ಫೋಟೋಗಳನ್ನು ಹಾಕುವುದಕ್ಕೆ ಆಕ್ಷೇಪಣೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆಯ ಹಿನ್ನೆಲೆಯಲ್ಲಿ ಈ ಸಂಬಂಧ ಸೂಕ್ತ ಕ್ರಮ ಜರುಗಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರು, ಅಧಿಕಾರಿಗಳಿಗೆ ಆದೇಶಿಸಿದ್ದಾರೆ.


ಸಾಮಾಜಿಕ ಕಾರ್ಯಕರ್ತ ಎಚ್.ಎಂ.ವೆಂಕಟೇಶ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಅದರಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳು, ತಾಲೂಕುಗಳು, ಮಹಾನಗರಪಾಲಿಕೆ, ನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಲ್ಲಿ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಜನಪ್ರತಿನಿಧಿಗಳು ಸರ್ಕಾರದ ಯೋಜನೆಗಳಿಗೆ ತಮ್ಮ ಹೆಸರು ಮತ್ತು ೆಟೋಗಳನ್ನು ಹಾಕುವುದರ ಮೂಲಕ ಸಾರ್ವಜನಿಕರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ತಿಳಿಸಿದ್ದರು.


ಪಬ್ಲಿಕ್ ಂಡ್‌ನಿಂದ ರೂಪಗೊಂಡ ಸರ್ಕಾರದ ಯೋಜನೆಗಳನ್ನು ರಾಜಕೀಯ ಪಕ್ಷಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಪಕ್ಷ ಸಂಘಟನೆಯ ಮತ್ತು ವೈಯಕ್ತಿಕ ಪ್ರಚಾರದ ಉದ್ದೇಶಕ್ಕಾಗಿ ದುರ್ಬಳಕೆ ಮಾಡುತ್ತಿರುವುದು ರಾಜ್ಯದಲ್ಲಿ ಕಂಡು ಬರುತ್ತಿದೆ. ಆದ್ದರಿಂದ ಮುಖ್ಯ ಕಾರ್ಯದರ್ಶಿಗಳಾದ ತಾವು, ಸರ್ಕಾರದ ಯೋಜನೆಗಳಾದ ಶುದ್ದ ಕುಡಿಯುವ ನೀರಿನ ಘಟಕ, ಬಸ್ ಶೆಲ್ಟರ್ಸ್, ಬಸ್ ನಿಲ್ದಾಣ, ಆಸ್ಪತ್ರೆ ಹಾಗೂ ಇನ್ನಿತರ ಯಾವುದೇ ಸರ್ಕಾರದ ಯೋಜನೆಗಳಲ್ಲಿ ಜನಪ್ರತಿನಿಧಿಗಳ, ರಾಜಕೀಯ ನಾಯಕರುಗಳ, ರಾಜಕೀಯ ಪಕ್ಷದ ಹೆಸರುಗಳು ಕಂಡು ಬಂದಲ್ಲಿ ತಕ್ಷಣ ತೆರವುಗೊಳಿ ‘‘ಸರ್ಕಾರದ ಯೋಜನೆಗಳೆಂದು’ ನಮೂದಿಸುವಂತೆ ಕಾರ್ಯದರ್ಶಿಗಳಿಗೆ ವೆಂಕಟೇಶ್ ಅವರು ಮನವಿ ಮಾಡಿದ್ದರು.


ವೆಂಕಟೇಶ್ ಅವರ ಮನವಿಗೆ ಸ್ಪಂದಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರು, ಇನ್ನು ಮುಂದೆ ಸರ್ಕಾರದಿಂದ ಅನುಷ್ಠಾನಗೊಳಿಸುವ ವಿವಿಧ ಕಾಮಗಾರಿಗಳಲ್ಲಿ ಮತ್ತು ನಿರ್ಮಾಣವಾಗುವ ಕಟ್ಟಡಗಳು ಹಾಗೂ ಯೋಜನೆಗಳಲ್ಲಿ ಸುಪ್ರೀಂಕೋರ್ಟ್ ನಿರ್ದೇಶನ ನೀಡಿರುವಂತೆ ಕ್ರಮ ಕೈಗೊಳ್ಳಲು ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿಗಳ ಪಂಚಾಯಿತು ಅಭಿವೃದ್ದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net