ಸಾಮಾನ್ಯ ವೀಕ್ಷಕರ ಭೇಟಿ; ಪರಿಶೀಲನೆ

19mdk05 vikram singh malik
Published on

ಮಡಿಕೇರಿ:

ವಿಧಾನಸಭಾ ಚುನಾವಣಾ ಹಿನ್ನೆಲೆ ಭಾರತ ಚುನಾವಣಾ ಆಯೋಗವು ಕೊಡಗು ಜಿಲ್ಲೆಯ ೨೦೮-ಮಡಿಕೇರಿ ವಿಧಾನಸಭಾ ಕ್ಷೇತ್ರ ಮತ್ತು ೨೦೯-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ವಿಕ್ರಮ್ ಸಿಂಗ್ ಮಲಿಕ್ ಭಾ.ಆ.ಸೇ. ಅವರನ್ನು ನಿಯೋಜಿಸಿದ್ದು, ಏಪ್ರಿಲ್, ೧೮ ರಂದು ಕೊಡಗು ಜಿಲ್ಲೆಯಲ್ಲಿ ವರದಿ ಮಾಡಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರನ್ನು ಬುಧವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಭೇಟಿ ಮಾಡಿ ಚುನಾವಣೆ ಸಿದ್ಧತೆ ಬಗ್ಗೆ ಪರಿಶೀಲಿಸಿದರು.

ವಿಧಾನಸಭಾ ಚುನಾವಣಾ ಸಂಬಂಧ ಹೆಚ್ಚಿನ ಮಾಹಿತಿಗೆ ಜಿಲ್ಲಾಡಳಿತ ಭವನದ ಮೊದಲ ಮಹಡಿಯ ಕೊಠಡಿ ಸಂಖ್ಯೆ ೩ ರಲ್ಲಿ ಬೆಳಗ್ಗೆ ೧೧ ರಿಂದ ಮಧ್ಯಾಹ್ನ ೧೨ ಗಂಟೆ ವರೆಗೆ ನೇರವಾಗಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ ೬೩೬೦೦೪೧೧೦೧ ಅಥವಾ ಸಾಮಾನ್ಯ ವೀಕ್ಷಕರ ಸಂಪರ್ಕ ಅಧಿಕಾರಿ ಡಾ.ಜೆ.ಆರ್.ಬಾಲಸುಬ್ರಮಣ್ಯಂ ೯೬೩೨೯೫೩೦೧೯ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net