ಅ. 6 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

04GDG07
Published on

ನಗರದ ಡಾ.ಬಿ.ಆರ್​. ಅಂಬೇಡ್ಕರ್​ ಭವನದಲ್ಲಿ ಅ.6 ರಂದು ಜರಗುವ ರಾಜ್ಯ ಮಟ್ಟದ ಪ್ರತಿಭಾನ್ವಿತ ಭೋವಿ ಸಮಾಜದ ವಿದ್ಯಾಥಿರ್ಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯ ಬಾಂಧವರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ರವಿ ಗುಂಜೀಕರ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಭೋವಿ ಸಮಾಜದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಯಲ್ಲಿ ಶೇ.85 ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾಥಿರ್ಗಳಿಗೆ ಪುರಸ್ಕಾರ ವಿತರಿಸಲಾಗುವುದು. ಅಜಿರ್ ಸಲ್ಲಿಸದೇ ಇರುವ ವಿದ್ಯಾಥಿರ್ಗಳು ಅ. 6 ರಂದು ಜರಗುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸೂಕ್ತ ದಾಖಲೆ ಸಲ್ಲಿಸಿ ಪುರಸ್ಕಾರಕ್ಕೆ ಭಾಜನರಾಗಬಹುದು ಎಂದು ತಿಳಿಸಿದರು.
ಬಸವರಾಜ ವೆಂಕಪ್ಪ ಬಳ್ಳಾರಿ, ಹುಚ್ಚಪ್ಪ ಸಂದಕದ, ಬಸವರಾಜ ಗದಗಿನ, ರಮೇಶ ಮ್ಯಾಗೇರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net