ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಲು ಮನವಿ

odeyar
Published on

ಕುಶಾಲನಗರ:

ಕೂಡುಮಂಗಳೂರು ಪಂಚಾಯಿತಿ ವ್ಯಾಪ್ತಿಯ ಹಲವು ಅಭಿವೃದ್ಧಿ ಕಾರ್ಯಗಳಿಗಾಗಿ ಸಹಕರಿಸುವಂತೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಳಿ ಗ್ರಾ.ಪಂ. ಅಧ್ಯಕ್ಷ ಭಾಸ್ಕರ್ ನಾಯಕ್ ಮನವಿ ಮಾಡಿದರು.

ಈಚೆಗೆ ಯದುವೀರ್ ಅವರನ್ನು ಭೇಟಿ ಮಾಡಿದ ಭಾಸ್ಕರ್ ನಾಯಕ್, ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯಬೇಕಿರುವ ಹಲವು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಗಮನ ಸೆಳೆದರು. ಇದಕ್ಕೆ ಅನುದಾನ ಒದಗಿಸುವಂತೆ ಮನವಿ ಮಾಡಿದರು.

ಈ ಕುರಿತು ಮಾತನಾಡಿದ ಭಾಸ್ಕರ್ ನಾಯಕ್ 24 ಪಂಚಾಯಿತಿ ಸದಸ್ಯರನ್ನು ಒಳಗೊಂಡ ಕೊಡಗಿನ ದೊಡ್ಡ ಗ್ರಾಮ ಪಂಚಾಯಿತಿ ಕೂಡುಮಂಗಳೂರು ಪಂಚಾಯತಿಯಾಗಿದ್ದು ಸುಮಾರು 10 ಸಾವಿರ ದಿಂದ 12 ಸಾವಿರ ಜನಸಂಖ್ಯೆ ಇದೆ.

ಮೂಲಭೂತ ಸೌಕರ್ಯ ಒದಗಿಸಲು ಹೆಚ್ಚಿನ ಅನುದಾನ ಬೇಕಾಗಿರುವುದರಿಂದ ಸಂಸದ ಯದುವೀರ್ ಒಡೆಯರ್ ಅವರ ಬಳಿ ಮನವಿ ಮಾಡಲಾಗಿದೆ. ಪಂಚಾಯತಿ ವ್ಯಾಪ್ತಿಯ ಆನೆಕೆರೆ ಅಭಿವೃದ್ಧಿಗೂ ಕೂಡ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಇದಕ್ಕೆ ಪೂರಕವಾಗಿ ಸ್ಪಂದಿಸುವ ಭರವಸೆಯನ್ನು ಸಂಸದರು ನೀಡಿರುವುದಾಗಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net