

ವಿಟ್ಲ: ಸಮಾಜದಲ್ಲಿ ಆಗುತ್ತಿರುವ ತೊಂದರೆಗಳಿಗೆ ವ್ಯಕ್ತಿ ವಿಕಾಸ ಆಗದಿರುವುದೇ ಸಮಸ್ಯೆಯಾಗಿದೆ. ಸಾಧು ಸಂತರಿಗೆ ಸಮಾಜದ ಮೇಲಿನ ಜವಾಬ್ದಾರಿಯಿದೆ. ವ್ಯಕ್ತಿ ವಿಕಾಸದಲ್ಲಿ ಸಂಸ್ಕೃತಿಯ ಪಾತ್ರ ಹಾಗೂ ವಿಶ್ವಮಾನವ ಧರ್ಮದ ಪರಿಕಲ್ಪನೆ ಜನರಲ್ಲಿ ಮೂಡಿಸುವ ಕುರಿತಾಗಿ ಚಿಂತನೆ ಮಾಡಲಾಗುತ್ತಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಹರಿಹರಪುರ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನೃಸಿಂಹ ಪೀಠದ ಶ್ರೀಗಳು ಭೇಟಿ ನೀಡಿ ದತ್ತಾಂಜನೇಯ ದೇವರ ದರ್ಶನ ಮಾಡಿದ ಸಂದರ್ಭದ ಗೌರವಾರ್ಪಣೆ ಮಾಡಿ ಆಶೀರ್ವಚನ ನೀಡಿದರು.
ಹರಿಹರಪುರ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನೃಸಿಂಹ ಪೀಠದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ ಭಾರತೀಯ ಸಂಸ್ಕೃತಿಯನ್ನು, ಈ ದೇಶವನ್ನು, ಧರ್ಮವನ್ನು ಕಾಪಾಡಬೇಕು. ಇದಕ್ಕಾಗಿ ಎಲ್ಲರೂ ಒಟ್ಟಾಗಿ ವೈವಿಧ್ಯತೆಯನ್ನು ಜೋಡಿಸಿಕೊಂಡು ಒಂದಾಗಿ ಕೆಲಸ ಮಾಡಬೇಕಾಗಿದೆ. ದೇಶದ ಧರ್ಮ ಮತ್ತು ಸಂಸ್ಕೃತಿಯನ್ನು ಸಂರಕ್ಷಣೆ ಹಾಗೂ ಸಂಘಟನೆ ಮಾಡಬೇಕೆಂಬ ಉದ್ದೇಶದಿಂದ ಸೌಹಾರ್ಧ ಬೇಟಿಯನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ಸುರೇಶ್ ರೈ, ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲು, ಗುರುದೇವದ ಸೇವಾ ಬಳಗದ ಅಧ್ಯಕ್ಷ ಅಶೋಕ್ ಕುಮಾರ್ ಬಿಜೈ, ಗುರುದೇವಾ ವಿದ್ಯಾ ಪೀಠದ ಸಂಚಾಲಕ ಸೇರಾಜೆ ಗಣಪತಿ ಭಟ್, ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ರೇಣುಕಾ ಎಸ್. ರೈ, ಐಟಿಐ ಪ್ರಾಂಶುಪಾಲ ಪ್ರವೀಣ್ ಕುಮಾರ್, ಯೋಜನೆಯ ಸಾರ್ವಜನಿಕ ಸಂಪರ್ಕಾಽಕಾರಿ ಮಾತೇಶ್ ಭಂಡಾರಿ, ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು, ಒಡಿಯೂರು ತುಳುಕೂಟದ ಅಧ್ಯಕ್ಷ ಯಶವಂತ ವಿಟ್ಲ, ದೇವಿಪ್ರಸಾದ್ ಶೆಟ್ಟಿ, ಯೋಜನೆಯ ಸೇವಾ ದೀಕ್ಷಿತರು, ಸಂಯೋಜಕರು, ಮೇಲ್ವಿಚಾರಕರು, ಯೋಜನೆಯ ಬಂಧುಗಳು, ಗುರುದೇವ ಸೇವಾ ಬಳಗದ ಸದಸ್ಯರು, ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಸದಸ್ಯರು, ಸಹಕಾರಿಯ ನಿರ್ದೇಶಕರು, ಐಟಿಐ ತರಬೇತುದಾರರು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.