

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿ ವತಿಯಿಂದ ನಡೆದ ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ, ಗ್ರಾಮೋತ್ಸವ 2023 ಗುರುವಂದನ-ಸೇವಾ ಸಂಭ್ರಮ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರಿಗೆ ಗುರುಕುಲದ ಪುಟಾಣಿಗಳಿಂದ ಗುರುವಂದನೆ, ಪಾದಪೂಜೆ, ತುಲಾಭಾರ, ಉಯ್ಯಾಲ ಸೇವೆ, ಸಂಘ ಸಂಸ್ಥೆಗಳಿಂದ ಗುರುವಂದನೆ ನಡೆಯಿತು. ಸಾಧ್ವಿ ಮಾತಾನಂದಮಯೀ ದಿವ್ಯ ಸಾನಿಧ್ಯ ವಹಿಸಿದ್ದರು.
ಬೆಳಗ್ಗೆ ಶ್ರೀಗಣಪತಿ ಹವನ, ಮಹಾಪೂಜೆ, ಅರವಿಂದ ಆಚಾರ್ಯ ಮಾಣಿಲ ಮತ್ತು ಬಳಗದಿಂದ ದಾಸವಾಣಿ ಕಾರ್ಯಕ್ರಮ ನಡೆಯಿತು. ಕ್ಷೇತ್ರದಿಂದ ರಾಜಾಂಗಣದವರೆಗೆ ಗಣ್ಯ ಅತಿಥಿಗಳ ಶೋಭಾಯಾತ್ರೆ ನಡೆಯಿತು. ಲೋಕನಾಥ ಜಿ. ಶೆಟ್ಟಿ, ಸರಿತಾ ಲೋಕನಾಥ ಅವರು ಶ್ರೀಗಳವರ ಪಾದ ಪೂಜೆ ನಡೆಸಿದರು.
ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಮುಂಬಯಿ ಸಮಿತಿ ಅಧ್ಯಕ್ಷ ವಾಮಯ್ಯ ಬಿ. ಶೆಟ್ಟಿ, ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಸಮಿತಿ ಕಾರ್ಯಾಧ್ಯಕ್ಷ ಲೋಕನಾಥ ಜಿ. ಶೆಟ್ಟಿ, ಕೋಶಾಧಿಕಾರಿಗಳಾದ ಎ. ಸುರೇಶ್ ರೈ, ಎ. ಅಶೋಕ್ ಕುಮಾರ್, ಒಡಿಯೂರು ಶ್ರೀ ವಜ್ರ ಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ. ಶೆಟ್ಟಿ ಉಪಸ್ಥಿತರಿದ್ದರು.