ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಅಗತ್ಯ

2Rayabag2
Published on

ರಾಯಬಾಗ: ಪ್ರತಿಯೊಬ್ಬರೂ ಶಿಕ್ಷಣ ಪಡೆಯುವಲ್ಲಿ ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖ ಎಂದು ಬಿಇಒ ಬಸವರಾಜಪ್ಪ ಆರ್. ಹೇಳಿದರು.

ತಾಲೂಕಿನ ದಿಗ್ಗೆವಾಡಿ ಗ್ರಾಮದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಗಂಗಪ್ಪ ಸಾತಪ್ಪ ಮೈಶಾಳೆ ಅನುದಾನಿತ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದೊಂದಿಗೆ ಒಳ್ಳೆಯ ಸಂಸ್ಕಾರ ನೀಡಬೇಕು ಎಂದರು.

ಸಂಸ್ಥೆಯ ಅಧ್ಯಕ್ಷ ಅಶೋಕ ಮೈಶಾಳೆ, ಕೆಎಲ್‌ಇ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಎಚ್.ಕೆ.ಗುರವ, ಹನುಮಂತ ನಾಯಿಕ, ಸಿಬಿಕೆಎಸ್‌ಎಸ್‌ಕೆ ನಿರ್ದೇಶಕ ಮಲ್ಲಪ್ಪ ಮೈಶಾಳೆ, ಪ್ರಕಾಶ ಮೈಶಾಳೆ, ವಿವೇಕಾನಂದ ಭೋಸ್ಲೆ ಇತರರಿದ್ದರು. ಮುಖ್ಯ ಶಿಕ್ಷಕ ಎಂ.ಎಸ್.ಪಾಟೀಲ ಸ್ವಾಗತಿಸಿದರು. ಆರ್.ಎಂ.ಪೂಜಾರಿ ನಿರೂಪಿಸಿದರು. ಪಿ.ಎಸ್.ಕಾಂಬಳೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net