ವಿದ್ಯಾರ್ಥಿಗಳ ಪ್ರಗತಿಗೆ ಕೆಎಲ್‌ಇ ಸಂಸ್ಥೆ ಪ್ರಯತ್ನ

21GKK1
Published on

ಗೋಕಾಕ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆ ಉದ್ಯೋಗ ಅವಕಾಶ ಕಲ್ಪಿಸಿ ಅವರ ಉಜ್ವಲ ಭವಿಷ್ಯಕ್ಕಾಗಿ ಕೆಎಲ್‌ಇ ಸಂಸ್ಥೆ ಶ್ರಮಿಸುತ್ತಿದೆ ಎಂದು ನಗರದ ಕೆಎಲ್‌ಇ ಸಿ.ಎಸ್. ಅಂಗಡಿ ಪ್ರೌಢಶಾಲಾ ಮುಖ್ಯಾಧ್ಯಾಪಕ ಜಿ.ಎಂ. ಬಿರಾದಾರ ಹೇಳಿದರು.

ನಗರದ ಕೆಎಲ್‌ಇ ಸಿ.ಎಸ್. ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಶುಕ್ರವಾರ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ನಿರಂತರ ಅಧ್ಯಯನಶೀಲರಾಗಿ ಸಮರ್ಥವಾಗಿ ಪರೀಕ್ಷೆ ಎದುರಿಸಿ ಪ್ರತಿಭಾನ್ವಿತರಾಗಿ ಸಂಸ್ಥೆಯ ಕೀರ್ತಿ ಹೆಚ್ಚಿಸುವಂತೆ ಕರೆ ನೀಡಿದರು.

ಪ್ರಾಚಾರ್ಯ ಕೆ.ಬಿ. ಮೆವುಂಡಿಮಠ ಮಾತನಾಡಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳಿದ್ದು ಆಸಕ್ತ ಕ್ಷೇತ್ರ ಆಯ್ಕೆ ಮಾಡಿಕೊಂಡು ಬದುಕು ರೂಪಿಸಿಕೊಳ್ಳಿ ಎಂದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಆಡಳಿತಾಕಾರಿ ಜಿ.ಎಂ. ಅಂದಾನಿ, ಪ್ರಾಚಾರ್ಯ ಎಂ.ಎ. ಪಾಟೀಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net