ಸಂವಿಧಾನದ ಆಶಯ ತಿಳಿದುಕೊಳ್ಳಲಿ

3
ರಾಮದುರ್ಗ ಪಟ್ಟಣದಲ್ಲಿ ಆಯೋಜಿಸಿದ್ದ ಸಂವಿಧಾನ ಜಾಗತಿ ಸಮಾವೇಶದಲ್ಲಿ ಡಾ.ಆರ್.ಬಿ.ಸಾಗರ ಮಾತನಾಡಿದರು. ಎಸ್.ಎಂ.ಸಕ್ರಿ, ಗೀತಾಂಜಲಿ ರಾಠೋಡ ಇದ್ದರು.
Published on

ರಾಮದುರ್ಗ: ದೇಶದ ಪ್ರತಿಯೊಬ್ಬರೂ ಸಂವಿಧಾನದ ಮೂಲ ಆಶಯ ಅರಿತರೆ ಸ್ವಾತಂತ್ರ್ಯ, ಸಮಾನತೆ, ಸಹೋದರತ್ವದಿಂದ ಜೀವನ ನಡೆಸಲು ಸಾಧ್ಯ ಎಂದು ಡಾ. ಆರ್.ಬಿ. ಸಾಗರ ಹೇಳಿದರು.

ಪಟ್ಟಣದ ಸಿ.ಎಸ್. ಬೆಂಬಳಗಿ ಕಲಾ, ಶಾ.ಎಂ.ಆರ್. ಪಾಲರೇಶಾ ವಿಜ್ಞಾನ ಹಾಗೂ ಜಿ.ಎಲ್. ರಾಠಿ ವಾಣಿಜ್ಯ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದಡಿ ಈಚೆಗೆ ಆಯೋಜಿಸಿದ್ದ ಸಂವಿಧಾನ ಜಾಗತಿ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್.ಎಂ. ಸಕ್ರಿ, ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವಪೀಠಿಕೆ ಬೋಧಿಸಿದರು. ಎನ್‌ಎಸ್‌ಎಸ್ ಸ್ವಯಂ ಸೇವಕರಿಂದ ಸಂವಿಧಾನ ಜಾಗತಿ ಜಾಥಾ ಜರುಗಿತು. ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು. ಎನ್‌ಎಸ್‌ಎಸ್ ಕಾರ್ಯಾಕ್ರಮಾಧಿಕಾರಿ ಗೀತಾಂಜಲಿ ರಾಠೋಡ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ರಕ್ಷಿತಾ ಕಟ್ಟಿಮನಿ, ಆಶಾ ಮರಡಿ ನಿರೂಪಿಸಿದರು. ಶ್ರುತಿ ಕುದರಿಮೋತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net