ಅಪರಾಧಿಗೆ ಜೀವಾವಧಿ ಶಿಕ್ಷೆ

565
Published on

ಹಾವೇರಿ: ಮಹಿಳೆಯೋರ್ವಳ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯವೆಸಗಿದ ತಾಲೂಕಿನ ನೆಲೋಗಲ್ಲ ಗ್ರಾಮದ ಮಹಾರುದ್ರಗೌಡ ವೀರಭದ್ರಗೌಡ ಸಿದ್ದನಗೌಡ್ರ(20) ಎಂಬುವನಿಗೆ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ ಕಿಣಿ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಗುರುವಾರ ತೀರ್ಪು ನೀಡಿದ್ದಾರೆ.

ಅಪರಾಧಿಯು ತಾನೆಸಗಿದ ಕೃತ್ಯದ ಕುರಿತು ಯಾರಿಗಾದರೂ ಹೇಳಿದರೆ ಪ್ರಾಣ ತೆಗೆಯುವುದಾಗಿ ಜೀವ ಬೆದರಿಕೆ ಹಾಕಿದ್ದಾಗಿ ನೊಂದ ಯುವತಿ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ದಂಡದ ಹಣದಲ್ಲಿ ನೊಂದ ಯುವತಿಗೆ 25 ಸಾವಿರ ರೂ. ಪರಿಹಾರ ನೀಡಲು ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸಿದ್ಧಾರೂಢ ಗೆಜ್ಜಿಹಳ್ಳಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net