ವಸತಿ ನಿಲಯದಲ್ಲಿ ಇರಲು ಅವಕಾಶ ನೀಡಿ

27-05-Shiva-4
ವಸತಿ ನಿಲಯದಿಂದ ಹೊರ ಹೋಗುವಂತೆ ಆದೇಶ ಹೊರಹೋಗುವಂತೆ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಮುಂದೆ ಎಐಡಿಎಸ್‌ಒ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತಿಪರ ವಸತಿ ನಿಲಯದ ವಿದ್ಯಾರ್ಥಿನಿಯರು ಸೋಮವಾರ ಪ್ರತಿಭಟನೆ ನಡೆಸಿದರು. ಸಂಘಟನೆ ಜಿಲ್ಲಾಧ್ಯಕ್ಷ ಹಯ್ಯಳಪ್ಪ, ಪದಾಕಾರಿಗಳಾದ ಸರೋಜಾ ಗೋನ್ವಾರ್, ಚನ್ನಬಸವ ಜಾನೇಕಲ್, ವಿದ್ಯಾರ್ಥಿನಿಯರಾದ ಶ್ರೀದೇವಿ, ಚಂದ್ರಕಲಾ, ಸಂಗೀತಾ, ಭೂದೇವಿ, ಶಿವಗಂಗಾ, ರೇಣುಕಾ ಇದ್ದರು.
Published on

ರಾಯಚೂರು: ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲಾಗುವ ಅಂಬೇಡ್ಕರ್ ವೃತ್ತಿಪರ ವಸತಿ ನಿಲಯದಲ್ಲಿನ ಆಡಳಿತ ಮಂಡಳಿ ಕೋಟಾದಲ್ಲಿ ಕಾಲೇಜು ಪ್ರವೇಶ ಪಡೆದ ವಿದ್ಯಾರ್ಥಿನಿಯರನ್ನು ಹೊರ ಹಾಕುತ್ತಿರುವುದನ್ನು ಖಂಡಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಸೋಮವಾರ ಪ್ರತಿಭಟನೆ ನಡೆಸಿದರು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ವಿದ್ಯಾರ್ಥಿನಿಯರು ಶೈಕ್ಷಣಿಕ ವರ್ಷ ಬಾಕಿ ಇರುವಾಗ ವಸತಿ ನಿಲಯದಿಂದ ಹೊರಹೋಗುವಂತೆ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ವಸತಿ ನಿಲಯದಲ್ಲಿ ಇರಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಕಳೆದ ಎರಡು ಮೂರು ವರ್ಷಗಳ ಹಿಂದೆ ವಸತಿ ನಿಲಯಕ್ಕೆ ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿನಿಯರಿಗೆ ವಸತಿ ನಿಲಯದಲ್ಲಿ ಇರಲು ಅವಕಾಶ ನೀಡಬೇಕು ಎಂಬ ಆದೇಶದ ಮೇರೆಗೆ ಅರ್ಜಿ ಹಾಕಿ ವಸತಿ ನಿಲಯಕ್ಕೆ 130 ವಿದ್ಯಾರ್ಥಿನಿಯರು ಪ್ರವೇಶ ಪಡೆದಿದ್ದಾರೆ.
ಈಗ ಅವರು ಆಡಳಿತ ಮಂಡಳಿ ಕೋಟಾದಡಿ ಕಾಲೇಜು ಪ್ರವೇಶ ಪಡೆದಿದ್ದಾರೆ ಎನ್ನುವ ಕಾರಣಕ್ಕೆ ಏಕಾಏಕಿ ಹೊರ ಹಾಕುತ್ತಿರುವುದು ಸರಿಯಲ್ಲ. ಇದರಿಂದ ಬಡ ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗುವಂತಾಗಲಿದೆ. ಕೂಡಲೇ ಸರ್ಕಾರ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಹಯ್ಯಳಪ್ಪ, ಪದಾಕಾರಿಗಳಾದ ಸರೋಜಾ ಗೋನ್ವಾರ್, ಚನ್ನಬಸವ ಜಾನೇಕಲ್, ವಿದ್ಯಾರ್ಥಿನಿಯರಾದ ಶ್ರೀದೇವಿ, ಚಂದ್ರಕಲಾ, ಸಂಗೀತಾ, ಭೂದೇವಿ, ಶಿವಗಂಗಾ, ರೇಣುಕಾ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net