ಹೊನ್ನಮ್ಮನಕೆರೆಗೆ ಬಾಗಿನ ಅರ್ಪಣೆ

19SPT1
ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಶ್ರೀ ಹೊನ್ನಮ್ಮನ ಕೆರೆ ಕ್ಷೇತ್ರದಲ್ಲಿ ಜಾತ್ರೋತ್ಸವದಲ್ಲಿ ಕೆರೆಗೆ ಗ್ರಾಮಸ್ಥರು ಹಾಗು ಜನಪ್ರತಿನಿಧಿಗಳು ಬಾಗಿನ ಅರ್ಪಿಸಿದರು. ವಿರೇಶ್, ಎ.ಮಂಜು, ರಂಜನ್, ಚಂದ್ರಮೌಳಿ ಇದ್ದರು.
Published on

ಸೋಮವಾರಪೇಟೆ: ದೊಡ್ಡಮಳ್ತೆ ಗ್ರಾಮದ ಇತಿಹಾಸ ಪ್ರಸಿದ್ದ ಹೊನ್ನಮ್ಮನಕೆರೆ ಕ್ಷೇತ್ರದಲ್ಲಿ ಜಾತ್ರೋತ್ಸವ ಹಾಗೂ ಕೆರೆಗೆ ಬಾಗಿನ ಬಿಡುವ ಕಾರ್ಯಕ್ರಮ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಶ್ರದ್ದಾಭಕ್ತಿಯಿಂದ ಸೋಮವಾರ ಜರುಗಿತು.

ಬೆಳಿಗ್ಗೆ ಸಂಪ್ರದಾಯದಂತೆ ಶ್ರೀ ಸಿದ್ದೇಶ್ವರ, ಬಸವೇಶ್ವರ, ಸ್ವರ್ಣಗೌರಿಯನ್ನು ಹೊನ್ನಮ್ಮ ದೇವಾಲಯ ಸಮಿತಿ ಮತ್ತು ಹೊನ್ನಮ್ಮದೇವಿ ಕುಟುಂಬಸ್ಥರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಾಗಿನವನ್ನು ಬಂಗಾರದ ಕಲ್ಲಿನ ಮೇಲಿಟ್ಟು ಪೂಜಿಸಿ, ನಂತರ ಕೆರೆಯ ನೀರಿನಲ್ಲಿ ಬಿಟ್ಟರು. ಗ್ರಾಮದ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ನವದಂಪತಿಗಳು ಪೂಜಿಸಿದ ಹರಕೆ ಬಾಗಿನವನ್ನು ಕೆರೆಗೆ ಅರ್ಪಿಸಿ ಪೂಜೆ ಸಲ್ಲಿಸಿದರು. ಅರಕಲಗೂಡು ಶಾಸಕ ಎ.ಮಂಜು, ಮಾಜಿ ಶಾಸಕ ಅಪ್ಪಚ್ಚು ರಂಜನ್, ಹಿರಿಯ ವಕೀಲ ಎಚ್.ಎಸ್.ಚಂದ್ರಮೌಳಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ, ವಿ.ಎಂ.ವಿಜಯ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಭಾರತೀಶ್, ಮತ್ತಿತರ ಗಣ್ಯರು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ದೇವಾಲಯ ಸಮಿತಿಯ ಅಧ್ಯಕ್ಷ ಡಿ.ಬಿ. ವೀರೇಶ್, ಉಪಾಧ್ಯಕ್ಷ ಡಿ.ಎಂ. ಪ್ರಸನ್ನ, ಕಾರ್ಯದರ್ಶಿ ಎಂ.ಜಿ. ಕಿರಣ್ ಕುಮಾರ್, ಗೌರವಾಧ್ಯಕ್ಷ ಎಂ.ಬಿ.ವಸಂತ್‌ಕುಮಾರ್ ಮತ್ತು ನಿರ್ದೆಶಕರುಗಳು ಇದ್ದರು. ಪ್ರಧಾನ ಅರ್ಚಕ ವೀರಯ್ಯ ಹಿರೇಮಠ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು.

ದೇವಾಲಯದ ವತಿಯಿಂದ ಅನ್ನದಾನದ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರ್ವಜನಿಕರಿಗೆ ಮನರಂಜನೆಗಾಗಿ ಬೋಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net